ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇಂದು 112 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,818ಕ್ಕೆ ಏರಿಕೆಯಾಗಿದೆ.
ಇಂದು ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ 238 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಒಟ್ಟು 971 ಜನ ಸೋಂಕಿತರು, ಜಿಲ್ಲಾ ಕೋವೀಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಚಿಕ್ಕಮಗಳೂರು ತಾಲೂಕಿನಲ್ಲಿ 49, ಕಡೂರು ತಾಲೂಕಿನಲ್ಲಿ 44, ತರೀಕೆರೆ ತಾಲೂಕಿನಲ್ಲಿ 16, ಮೂಡಿಗೆರೆ ತಾಲೂಕಿನಲ್ಲಿ 02, ಕೊಪ್ಪ ತಾಲೂಕಿನಲ್ಲಿ 01 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇಂದು ಕೊರೊನಾ ಸೋಂಕಿಗೆ ಮೂರು ಜನ ಬಲಿಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 37ಕ್ಕೆ ಏರಿಕೆಯಾಗಿದೆ.
ಇಂದು ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ ಏರಿಯಾಗಳನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ ಡೌನ್ ಮಾಡಿ ಕಟ್ಟೆಚ್ಚರ ವಹಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,818ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 810 ಸಕ್ರಿಯ ಪ್ರಕರಣಗಳಿವೆ.