ಚಿಕ್ಕಮಗಳೂರು : ಸೈಕಲ್ ಹೊಡೆಯುತ್ತಿದ್ದ ವೇಳೆ 7ನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಎನ್ ಆರ್ ಪುರ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಮೃತನನ್ನ ಸೋಹನ್ ರಾಮ್ (12) ಎಂದು ಗುರುತಿಸಲಾಗಿದೆ. ಪ್ರತಿದಿನದಂತೆ ಎನ್. ಆರ್ ಪುರದ ಮೆಸ್ಕಾಂ ಕಚೇರಿ ಬಳಿ ಸೈಕಲ್ ಹೊಡೆಯುತ್ತಿದ್ದ ಯುವಕ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾನೆ.
ಕೂಡಲೇ ಸ್ಥಳೀಯರು ಹಾಗೂ ಪೋಷಕರು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದಾರೆ. ದುರದೃಷ್ಟವಶಾತ್ ಮಾರ್ಗಮಧ್ಯೆ ಬಾಲಕ ಕೊನೆಯುಸಿರೆಳೆದಿದ್ದಾನೆ.
ಮೃತ ಬಾಲಕ ಎನ್ ಆರ್ ಪುರದ ಡಿಸಿಎಂಸಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ ಎನ್ನಲಾಗಿದೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಓದಿ: ಬೈಕ್ಗೆ ತಮಿಳುನಾಡು ಸಾರಿಗೆ ಬಸ್ ಡಿಕ್ಕಿ: ಸ್ಥಳದಲ್ಲೇ ನಗರಸಭೆ ಮಾಜಿ ಸದಸ್ಯ ಸಾವು