ಚಿಕ್ಕಮಗಳೂರು: ಜಿಲ್ಲೆಯ ಬಹುತೇಕ ಕಡೆ ಇಂದು ಗುಡುಗು ಸಹಿತ ಭಾರಿ ಮಳೆ ಸುರಿದಿದೆ. ಸಿಡಿಲಿನ ಅಬ್ಬರಕ್ಕೆ ಕಡೂರು ತಾಲೂಕಿನಲ್ಲಿ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಕೋಡಿಹಳ್ಳಿಯ ರೇವಣ್ಣ (40) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.
ರೇವಣ್ಣ ಕುರಿ ಕಾಯುತ್ತಿದ್ದಾಗ ಸಿಡಿಲು ಬಡಿದಿದ್ದರಿಂದ ಈ ದುರಂತ ಸಂಭವಿಸಿದೆ ಎನ್ನಲಾಗುತ್ತಿದೆ. ಸುದ್ದಿ ತಿಳಿದು ಸ್ಥಳಕ್ಕೆ ಯಗಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಬಗ್ಗೆ ದೂರು ದಾಖಲು ಮಾಡಿಕೊಂಡಿದ್ದಾರೆ.