ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿಂದು 121 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2,743ಕ್ಕೆ ಏರಿಕೆಯಾಗಿದೆ.
ಇಂದು ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ 80 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು1,743 ಜನ ಸೋಂಕಿತರು ಜಿಲ್ಲಾ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.
ಚಿಕ್ಕಮಗಳೂರು ತಾಲೂಕಿನಲ್ಲಿ 32, ಕಡೂರು ತಾಲೂಕಿನಲ್ಲಿ 47, ತರೀಕೆರೆ ತಾಲೂಕಿನಲ್ಲಿ 29, ಮೂಡಿಗೆರೆ ತಾಲೂಕಿನಲ್ಲಿ 02, ಕೊಪ್ಪ ತಾಲೂಕಿನಲ್ಲಿ 04, ಅಜ್ಜಂಪುರದಲ್ಲಿ 07 ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಇಂದು ಸೋಂಕಿಗೆ ಇಬ್ಬರು ಬಲಿಯಾಗಿದ್ದು, ಈವರೆಗೆ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 55ಕ್ಕೆ ಏರಿಕೆಯಾಗಿದೆ.
ಇಂದು ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ ಏರಿಯಾವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,743 ಕ್ಕೆ ಏರಿಕೆಯಾಗಿದ್ದರೆ, 945 ಸಕ್ರಿಯ ಪ್ರಕರಣಗಳಿವೆ.