ಚಿಕ್ಕಮಗಳೂರು: ಜಿಲ್ಲೆಯಲ್ಲಿ ಈ ದಿನ 156 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ, 7,763 ಕ್ಕೆ ಏರಿಕೆಯಾಗಿದೆ.
ಇಂದು ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ 88 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು , ಈವರೆಗೂ ಜಿಲ್ಲೆಯಲ್ಲಿ ಒಟ್ಟು 6,214 ಜನ ಸೋಂಕಿತರು ಜಿಲ್ಲಾ ಕೋವೀಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದು ಗುಣ ಮುಖರಾಗಿ ಬಿಡುಗಡೆಯಾದಂತೆ ಆಗಿದೆ.
ಚಿಕ್ಕಮಗಳೂರು ತಾಲೂಕಿನಲ್ಲಿ 76, ಕಡೂರು ತಾಲೂಕಿನಲ್ಲಿ 29, ತರೀಕೆರೆ ತಾಲೂಕಿನಲ್ಲಿ 40, ಕೊಪ್ಪ ತಾಲೂಕಿನಲ್ಲಿ 03, ಮೂಡಿಗೆರೆ ತಾಲೂಕಿನಲ್ಲಿ 08 ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ. ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 114 ಕ್ಕೆ ಏರಿಕೆಯಾಗಿದೆ. ಈ ದಿನ ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ, ಮನೆಯನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,763 ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 1,459 ಸಕ್ರಿಯ ಪ್ರಕರಣಗಳಿವೆ.