ಚಿಕ್ಕಮಗಳೂರು : ಜಿಲ್ಲೆಯಲ್ಲಿ ಇಂದು 171 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ, 6,704ಕ್ಕೆ ಏರಿಕೆಯಾಗಿದೆ.
ಈವರೆಗೂ ಜಿಲ್ಲೆಯಲ್ಲಿ ಒಟ್ಟು 4,677 ಜನ ಸೋಂಕಿತರು ಜಿಲ್ಲಾ ಕೋವೀಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಸಾವಿನ ಸಂಖ್ಯೆ 103ಕ್ಕೆ ಏರಿಕೆಯಾಗಿದೆ.
ಇಂದು ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ ಮನೆಯನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,704ಕ್ಕೆ ಏರಿಕೆಯಾಗಿದ್ದು ಸದ್ಯ 1,924 ಸಕ್ರಿಯ ಪ್ರಕರಣಗಳಿವೆ.