ETV Bharat / state

ಚಿಕ್ಕಮಗಳೂರಿನಲ್ಲಿ ಇಂದು ಮತ್ತಿಬ್ಬರಿಗೆ ಕೊರೊನಾ ದೃಢ: ಸೋಂಕಿತರ ಸಂಖ್ಯೆ 26ಕ್ಕೆ ಏರಿಕೆ

author img

By

Published : Jun 19, 2020, 8:14 PM IST

ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು 2 ಕೊರೊನಾ ಪಾಸಿಟಿವ್​ ಪ್ರಕರಣ ದಾಖಲಾಗಿದ್ದು, ಸೋಂಕಿತರ ಸಂಖ್ಯೆ 26ಕ್ಕೆ ಏರಿದೆ. ಸದ್ಯ ಎಲ್ಲರನ್ನೂ ಸೂಕ್ತ ಚಿಕಿತ್ಸೆಗೆ ಒಳಪಡಿಸಿದ್ದು, ಅದರಲ್ಲಿ ಈಗಾಗಲೇ 18 ಮಂದಿ ಗುಣಮುಖರಾಗಿ ಮನೆಗೆ ಹಿಂತಿರುಗಿದ್ದಾರೆ.

2 Corona cases confirm in Chikmagalur today
ಚಿಕ್ಕಮಗಳೂರಿನಲ್ಲಿ ಇಂದು ಮತ್ತಿಬ್ಬರಿಗೆ ಕೊರೊನಾ ದೃಢ: ಸೋಂಕಿತರ ಸಂಖ್ಯೆ 26ಕ್ಕೆ ಏರಿಕೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇಂದು 2 ಕೊರೊನಾ ಪಾಸಿಟಿವ್​ ಪ್ರಕರಣ ದಾಖಲಾಗಿದ್ದು, ಸೋಂಕಿತರ ಸಂಖ್ಯೆ 26ಕ್ಕೆ ಏರಿದೆ.

ಜಿಲ್ಲೆಯಲ್ಲಿ ಈವರೆಗೂ ಕೊರೊನಾ ಸೋಂಕಿಗೆ ಸಿಲುಕಿದ್ದವರು 26 ಮಂದಿ. ಸದ್ಯ ಎಲ್ಲರನ್ನೂ ಸೂಕ್ತ ಚಿಕಿತ್ಸೆಗೆ ಒಳಪಡಿಸಿದ್ದು, ಅದರಲ್ಲಿ ಈಗಾಗಲೇ 18 ಮಂದಿ ಗುಣಮುಖರಾಗಿ ಮನೆಗೆ ಹಿಂತಿರುಗಿದ್ದಾರೆ.

ಚಿಕ್ಕಮಗಳೂರು ತಾಲೂಕಿನಲ್ಲೇ ಒಂದು ಪ್ರಕರಣ ಪತ್ತೆಯಾದರೆ, ಮತ್ತೊಂದು ಪ್ರಕರಣ ತರೀಕೆರೆ ತಾಲೂಕಿನಲ್ಲಿ ಪತ್ತೆಯಾಗಿದೆ. 35 ವರ್ಷ ವರ್ಷದ ಪುರುಷ ಹಾಗೂ 20 ವರ್ಷದ ಯುವಕನಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಒಬ್ಬರು ಉಡುಪಿಗೆ ಪ್ರಯಾಣ ಮಾಡಿ ಬಂದವರಾಗಿದ್ದಾರೆ. ಇನ್ನೊಬ್ಬ ಸೋಂಕಿತನಿಗೆ ಕೊರೊನಾ ಹೇಗೆ ತಗುಲಿದೆ ಎಂಬುದು ಇನ್ನೂ ತಿಳಿದು ಬಂದಿಲ್ಲ.

ಸದ್ಯ ಇವರ ವಾಸ ಸ್ಥಳವನ್ನು ಸೀಲ್ ಡೌನ್ ಮಾಡಿ, ಕಟ್ಟೆಚ್ಚರ ವಹಿಸಲಾಗಿದೆ. ಜಿಲ್ಲಾ ಆರೋಗ್ಯ ಇಲಾಖೆ ಈ ಇಬ್ಬರ ಜೊತೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದ್ದವರನ್ನು ಹುಡುಕಲು ಪ್ರಾರಂಭಿಸಿದೆ. ಸೋಂಕಿತರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.