ಚಿಕ್ಕಮಗಳೂರು: ಜಿಲ್ಲೆಯಲ್ಲಿ ದುರಂತವೊಂದು ನಡೆದಿದೆ. ಮದುವೆಗೆ ವಿರೋಧ ಉಂಟಾದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಶರಣಾಗಿರುವ ಘಟನೆ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.
ನೂತನ್(25), ಅಪೂರ್ವ(22) ಮೃತರು. ಮೊದಲು ಯುವಕ-ಯುವತಿ ಮದುವೆ ಮಾಡಿಕೊಂಡು ಬಳಿಕ ವಿಷ ಕುಡಿದಿದ್ದಾರೆ. ವಿಷಯ ತಿಳಿದ ಕೂಡಲೇ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಸಾವನ್ನಪ್ಪಿದ್ದಾರೆ.
ಸದ್ಯ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.