ಚಿಕ್ಕಮಗಳೂರು: ಇಂದು ಜಿಲ್ಲೆಯಲ್ಲಿ 33 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 791ಕ್ಕೆ ಏರಿಕೆಯಾಗಿದೆ.
ಚಿಕ್ಕಮಗಳೂರು ತಾಲೂಕಿನಲ್ಲಿ 14, ಕಡೂರು ತಾಲೂಕಿನಲ್ಲಿ 05, ತರೀಕೆರೆ ತಾಲೂಕಿನಲ್ಲಿ 11, ಕೊಪ್ಪ ತಾಲೂಕಿನಲ್ಲಿ 02, ಶೃಂಗೇರಿ ತಾಲೂಕಿನ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ.
ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಇಂದು ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ ಏರಿಯಾಗಳನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ ಡೌನ್ ಮಾಡಿ ಕಟ್ಟೆಚ್ಚರ ವಹಿಸಲಾಗಿದೆ.
ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ ಇಂದು 10 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಒಟ್ಟು 404 ಜನ ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 791ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 367 ಸಕ್ರಿಯ ಪ್ರಕರಣಗಳಿವೆ.