ಚಿಕ್ಕಮಗಳೂರು: ಕಾಫಿನಾಡಲ್ಲಿ ಮತ್ತೆ 4 ದಿನ ಸಂಪೂರ್ಣ ಲಾಕ್ಡೌನ್ ಮಾಡಲಾಗುತ್ತಿದ್ದು, ಸೋಂಕು ನಿಯಂತ್ರಿಸಲು ಕಠಿಣ ಲಾಕ್ಡೌನ್ಗೆ ಜಿಲ್ಲಾಡಳಿತ ಮುಂದಾಗಿದೆ.
ಈ ಬಗ್ಗೆ ಮಾತನಾಡಿರುವ ಜಿಲ್ಲಾಧಿಕಾರಿ ಕೆ.ಎನ್. ರಮೇಶ್, ಮೇ 24 ರಿಂದ 28ರ ತನಕ ಲಾಕ್ಡೌನ್ ಮುಂದುವರೆಸಿ ಕಠಿಣ ರೂಲ್ಸ್ನಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ. ತುರ್ತು ಮೆಡಿಕಲ್ ಸೇವೆ ಹೊರತುಪಡಿಸಿ ವಾಹನ ಸಂಚಾರ ಕಂಪ್ಲೀಟ್ ಬಂದ್ ಅಗಲಿದೆ. ಹೋಟೆಲ್, ದಿನಸಿ ಅಂಗಡಿಗೆ, ಹೋಂ ಡೆಲಿವರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ.
ತಳ್ಳುವ ಗಾಡಿಯಲ್ಲಿ ಹಣ್ಣು ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದ್ದು, ಬೆಳಗ್ಗೆ 6-10 ಗಂಟೆವರೆಗೆ ಮಾತ್ರ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಇನ್ನೂ ನಾಲ್ಕು ದಿನ ಲಾಕ್ಡೌನ್ ಮುಂದುವರೆಸಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕಾಗಿ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.