ಚಿಕ್ಕಮಗಳೂರು : ಜಿಲ್ಲೆಯಲ್ಲಿ ಇಂದು 41 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1087ಕ್ಕೆ ಏರಿಕೆಯಾಗಿದೆ.
ಈ ದಿನ ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ 11 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೂ ಜಿಲ್ಲೆಯಲ್ಲಿ ಒಟ್ಟು 451 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾದಂತಾಗಿದೆ. ಚಿಕ್ಕಮಗಳೂರು ತಾಲೂಕಿನಲ್ಲಿ 30, ಕಡೂರು 4, ತರೀಕೆರೆ 5, ಮೂಡಿಗೆರೆ 1, ಅಜ್ಜಂಪುರದಲ್ಲಿ ಒಬ್ಬ ಸೋಂಕಿತ ಪತ್ತೆಯಾಗಿದ್ದಾರೆ.
ಈ ದಿನ ಸೋಂಕಿಗೆ ಒಬ್ಬರು ಬಲಿಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಸೋಂಕಿತರು ವಾಸ ಮಾಡುತ್ತಿದ್ದ ಏರಿಯಾವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ಡೌನ್ ಮಾಡಿ ಕಟ್ಟೆಚ್ಚರವಹಿಸಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1087ಕ್ಕೆ ಏರಿದೆ. ಜಿಲ್ಲೆಯಲ್ಲಿ ಒಟ್ಟು 614 ಸಕ್ರಿಯ ಪ್ರಕರಣಗಳಿವೆ.