ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇಂದು 46 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ, 12,448 ಕ್ಕೆ ಏರಿಕೆಯಾಗಿದೆ.
ಇಂದು ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ 49 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಒಟ್ಟು 11,792 ಜನ ಸೋಂಕಿತರು ಚಿಕಿತ್ಸೆಯನ್ನು ಪಡೆದು ಗುಣಮುಖರಾಗಿ ಬಿಡುಗಡೆಯಾದಂತಾಗಿದೆ.
ಚಿಕ್ಕಮಗಳೂರು ತಾಲೂಕಿನಲ್ಲಿ 08, ಕಡೂರು ತಾಲೂಕಿನಲ್ಲಿ 08, ತರೀಕೆರೆ ತಾಲ್ಲೂಕಿನಲ್ಲಿ 05, ಮೂಡಿಗೆರೆ ತಾಲೂಕಿನಲ್ಲಿ 02, ಶೃಂಗೇರಿ ತಾಲೂಕಿನಲ್ಲಿ 13, ಎನ್ಆರ್ ಪುರ ತಾಲೂಕಿನಲ್ಲಿ 10 ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ.
ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 136ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 471 ಸಕ್ರಿಯ ಪ್ರಕರಣಗಳಿವೆ.