ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿಯಲ್ಲಿ ನಡೆದ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಸನ್ನ, ಅಭಿ, ವೆಂಕಟೇಶ್, ಸಾಗರ್, ಸುಗಮ್ ಬಂಧಿತ ಆರೋಪಿಗಳು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಾಲಕಿಯ ಚಿಕ್ಕಮ್ಮ ಸೇರಿದಂತೆ 8 ಜನರನ್ನು ಶೃಂಗೇರಿ ಪೊಲೀಸರು ಬಂಧಿಸಿದ್ದರು. ಇದೀಗ ಮತ್ತೆ 5 ಮಂದಿಯನ್ನು ಬಂಧಿಸಿದ್ದು, ಒಟ್ಟು ಬಂಧಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.
ಕಳೆದ ನಾಲ್ಕು ತಿಂಗಳಲ್ಲಿ ಬಾಲಕಿಯ ಮೇಲೆ ಸುಮಾರು 30 ಮಂದಿ ಅತ್ಯಾಚಾರ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಪೈಕಿ ಬಾಲಕಿ ಕೆಲವರ ಹೆಸರು ತಿಳಿಸಿದ್ದು, 17 ಮಂದಿಯ ವಿರುದ್ಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಯನ್ನು ಚಿಕ್ಕಮಗಳೂರಿನ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿ ಆರೈಕೆ ಮಾಡಲಾಗುತ್ತಿದೆ.