ETV Bharat / state

ಚಿಕ್ಕಮಗಳೂರು: ಇಂದು 56 ಕೊರೊನಾ ಸೋಂಕಿತರು ಪತ್ತೆ

author img

By

Published : Aug 1, 2020, 4:51 PM IST

ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು 56 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಈವರೆಗೆ 440 ಜನ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

Chikkamagaluru
Chikkamagaluru

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಇಂದು ಹೊಸದಾಗಿ 56 ಜನರಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 1,046 ಕ್ಕೆ ಏರಿಕೆಯಾಗಿದೆ.

ಈವರೆಗೆ ಜಿಲ್ಲೆಯಲ್ಲಿ ಒಟ್ಟು 440 ಜನ ಸೋಂಕಿತರು ಜಿಲ್ಲಾ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 585 ಸಕ್ರಿಯ ಪ್ರಕರಣಗಳಿದ್ದು, 21 ಜನ ಸಾವನ್ನಪ್ಪಿದ್ದಾರೆ.

ಚಿಕ್ಕಮಗಳೂರು ತಾಲೂಕಿನಲ್ಲಿ 30, ಕಡೂರು ತಾಲೂಕಿನಲ್ಲಿ 09, ತರೀಕೆರೆ ತಾಲೂಕಿನಲ್ಲಿ 08, ಮೂಡಿಗೆರೆ ತಾಲೂಕಿನಲ್ಲಿ 01, ಎನ್ ಆರ್ ಪುರ ತಾಲೂಕಿನಲ್ಲಿ 03, ಅಜ್ಜಂಪುರದಲ್ಲಿ 05 ಜನರಿಗೆ ಸೋಂಕು ಪತ್ತೆಯಾಗಿದೆ.

ಈಗಾಗಲೇ ಸೋಂಕಿತರು ವಾಸ ಮಾಡುತ್ತಿದ್ದ ಏರಿಯಾವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸೀಲ್ ಡೌನ್ ಮಾಡಿದ್ದು, ಯಾರು ಮನೆಯಿಂದ ಹೊರಗೆ ಬಾರದಂತೆ ಸೂಚಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.