ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಿನ್ನೆ ಒಂದೇ ದಿನ 61 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 677ಕ್ಕೆ ಏರಿಕೆಯಾಗಿದೆ.
ಚಿಕ್ಕಮಗಳೂರು ತಾಲೂಕಿನಲ್ಲಿ 18, ಕಡೂರು ತಾಲೂಕಿನಲ್ಲಿ 30, ತರೀಕೆರೆ ತಾಲೂಕಿನಲ್ಲಿ 12, ಮೂಡಿಗೆರೆ ತಾಲೂಕಿನಲ್ಲಿ ಓರ್ವ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ನಿನ್ನೆ ಪತ್ತೆಯಾಗಿದೆ. ಇನ್ನು ಕೊರೊನಾ ಸೋಂಕಿಗೆ ಓರ್ವ ಬಲಿಯಾಗಿದ್ದು, ಜಿಲ್ಲೆಯಲ್ಲಿ ಸಾವಿಗೀಡಾದವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 677 ಕ್ಕೆ ಏರಿಕೆಯಾಗಿದ್ದು, ಒಟ್ಟು 278 ಸಕ್ರಿಯ ಪ್ರಕರಣಗಳಿವೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ನಿನ್ನೆ 05 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 381 ಜನ ಸೋಂಕಿತರು, ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.