ETV Bharat / state

ಚಿಕ್ಕಮಗಳೂರಿನ 74 ಮಂದಿಗೆ ಕೊರೊನಾ.. ಸೋಂಕಿತರ ಸಂಖ್ಯೆ 990ಕ್ಕೆ ಏರಿಕೆ

ಇನ್ನೂ ಕೋವಿಡ್-19 ಆಸ್ಪತ್ರೆಯಿಂದ ಇಂದು 6 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 440 ಮಂದಿ ಜಿಲ್ಲಾ ಕೋವೀಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆ ಸೇರಿದ್ದಾರೆ..

Chickmagaluru corona case
Chickmagaluru corona case
author img

By

Published : Jul 31, 2020, 6:44 PM IST

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಇಂದು 74 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 990ಕ್ಕೆ ಏರಿಕೆಯಾಗಿದೆ.

ಚಿಕ್ಕಮಗಳೂರು ತಾಲೂಕಿನಲ್ಲಿ 28, ಕಡೂರು ತಾಲೂಕಿನಲ್ಲಿ 16, ತರೀಕೆರೆ ತಾಲೂಕಿನಲ್ಲಿ 17, ಶೃಂಗೇರಿ ತಾಲೂಕಿನಲ್ಲಿ 2, ಕೊಪ್ಪ ತಾಲೂಕಿನಲ್ಲಿ 4, ಮೂಡಿಗೆರೆ ತಾಲೂಕಿನಲ್ಲಿ 1, ಎನ್ಆರ್‌ ಪುರ ತಾಲೂಕಿನಲ್ಲಿ 2, ಅಜ್ಜಂಪುರದಲ್ಲಿ 4 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಇನ್ನೂ ಕೋವಿಡ್-19 ಆಸ್ಪತ್ರೆಯಿಂದ ಇಂದು 6 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 440 ಮಂದಿ ಜಿಲ್ಲಾ ಕೋವೀಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆ ಸೇರಿದ್ದಾರೆ.

ಇನ್ನೂ ಈವರೆಗೆ 21 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇಂದು ಪತ್ತೆಯಾದ ಸೋಂಕಿತರ ಪ್ರದೇಶವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್‌ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ. ಸದ್ಯ 529 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.