ಚಿಕ್ಕಮಗಳೂರು: ಇಂದು 79 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2,112 ತಲುಪಿದೆ.
ಚಿಕ್ಕಮಗಳೂರು ತಾಲೂಕಿನಲ್ಲಿ 31, ಕಡೂರು 25, ತರೀಕೆರೆ 19, ಮೂಡಿಗೆರೆ 02, ಶೃಂಗೇರಿ 02 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಐವರು ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 43ಕ್ಕೆ ಏರಿಕೆಯಾಗಿದೆ.
ಇಂದು 09 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಈವರೆಗೂ ಜಿಲ್ಲೆಯಲ್ಲಿ ಒಟ್ಟು 1,323 ಜನ ಸೋಂಕಿತರು ಗುಣಮುಖರಾದಂತಾಗಿದೆ. ಜಿಲ್ಲೆಯಲ್ಲಿ ಒಟ್ಟು 746 ಸಕ್ರಿಯ ಪ್ರಕರಣಗಳಿವೆ.
ಸೋಂಕಿತರು ವಾಸ ಮಾಡುತ್ತಿದ್ದ ಏರಿಯಾವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ.