ಚಿಕ್ಕಮಗಳೂರು : ಜಿಲ್ಲೆಯಲ್ಲಿ ಈ ದಿನ 89 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 5,734 ಕ್ಕೆ ಏರಿಕೆಯಾಗಿದೆ.
ಚಿಕ್ಕಮಗಳೂರು ತಾಲೂಕಿನಲ್ಲಿ 33, ಕಡೂರು ತಾಲೂಕಿನಲ್ಲಿ 24, ತರೀಕೆರೆ ತಾಲೂಕಿನಲ್ಲಿ 15, ಮೂಡಿಗೆರೆ ತಾಲೂಕಿನಲ್ಲಿ 02, ಶೃಂಗೇರಿ ತಾಲೂಕಿನಲ್ಲಿ 02, ಕೊಪ್ಪ ತಾಲೂಕಿನಲ್ಲಿ 03,ಎನ್ ಆರ್ ಪುರ ತಾಲೂಕಿನಲ್ಲಿ 10 ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ.
ಜಿಲ್ಲೆಯಲ್ಲಿಂದು 170 ಮಂದಿ ಕೊರೊನಾದಿಂದ ಗುಣಮುಖರಾಗಿ ವಿವಿಧ ಕೋವಿಡ್ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.ಈ ಮೂಲಕ 4,143 ಜನರು ಗುಣಮುಖರಾಗಿದಂತಾಗಿದೆ. ಇನ್ನು ಜಿಲ್ಲೆಯಲ್ಲಿ ಒಟ್ಟು 1,394 ಸಕ್ರಿಯ ಪ್ರಕರಣಗಳಿವೆ.
ಕೊರೊನಾಗೆ ಈ ದಿನ ಮೂರು ಜನರು ಬಲಿಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 97 ಕ್ಕೆ ಏರಿಕೆಯಾಗಿದೆ.
ಈ ದಿನ ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ ಏರಿಯಾವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ.