ಚಿಕ್ಕಮಗಳೂರು: ಬಾಳೆಹೊನ್ನೂರಿನಲ್ಲಿ ದಲಿತ ಕೂಲಿ ಕಾರ್ಮಿಕರನ್ನು ಕೂಡಿ ಹಾಕಿ ಹಲ್ಲೆ ನಡೆಸಿದ ಘಟನೆ ಹಾಗೂ ಘಟನೆಯಲ್ಲಿ ದಲಿತ ಮಹಿಳೆಗೆ ಗರ್ಭಪಾತವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದಲಿತ ಸಂಘಟನೆಗಳ ಒಕ್ಕೂಟವು ಪ್ರತಿಭಟನೆ ನಡೆಸಿದೆ.
ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದು, ಕೂಡಲೇ ಆರೋಪಿ ಜಗದೀಶ್ ಗೌಡ ಹಾಗೂ ಆತನ ಮಗನನ್ನು ಬಂಧಿಸುವಂತೆ ಆಗ್ರಹಿಸಿದರು. ಈ ಬಗ್ಗೆ ಕ್ರಮಕೈಗೊಳ್ಳದ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಪ್ರಕರಣದಲ್ಲಿ ಬಾಳೆಹೊನ್ನೂರು ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ. ಕೂಡಲೇ ದಲಿತ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು. ನ್ಯಾಯ ಸಿಗುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಇದನ್ನೂ ಓದಿ :ದಲಿತ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ: ಇಂದು ಬಾಳೆಹೊನ್ನೂರು ಚಲೋ, ಪ್ರತಿ ದೂರು ದಾಖಲಿಸಿದ ಜಗದೀಶ್ ಪತ್ನಿ