ETV Bharat / state

ಜಿಂಕೆಯನ್ನು ಸಾಕಿದ್ದ ವ್ಯಕ್ತಿಯ ಮನೆ ಮೇಲೆ ಅರಣ್ಯ ಸಿಬ್ಬಂದಿ ದಾಳಿ

ಕಾಫಿ ಎಸ್ಟೇಟ್ ಒಂದರಲ್ಲಿ ಜಿಂಕೆ ಮರಿ ಸಾಕಿದ ಮಾಲೀಕರ ವಿರುದ್ಧ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿದೆ.

ಜಿಂಕೆ ಮರಿ
ಜಿಂಕೆ ಮರಿ
author img

By

Published : Feb 5, 2023, 7:59 PM IST

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಕೆ ತಲಗೂರು ಗ್ರಾಮದ ಕಾಫಿ ಎಸ್ಟೇಟ್ ಮಾಲೀಕ ತಿಮೋತಿ ಮಿಸ್ಕಿತ್ ಅವರ ತೋಟದ ಮನೆಯಲ್ಲಿ ಸಾಕಿದ್ದ ಚುಕ್ಕಿ ಜಿಂಕೆ ಮರಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.

ತಿಮೋತಿ ಮಿಸ್ಕಿತ್ ಅವರ ಮನೆಯಲ್ಲಿ ಜಿಂಕೆಯ ಉಗುರು ಸೇರಿದಂತೆ ಅಲಂಕಾರಿಕ ವಸ್ತುಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ. ಈ ವೇಳೆ ಅವರ ಮೇಲೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ವಯ ಪ್ರಕರಣ ದಾಖಲಿಸಲಾಗಿದೆ. ನಿರೀಕ್ಷಕಿ ಸುನಿತಾ ಅವರ ನೇತೃತ್ವದ ತಂಡ ಖಚಿತ ಮಾಹಿತಿಯನ್ನಾಧರಿಸಿ ದಾಳಿ ನಡೆಸಿದ್ದಾರೆ. ಜಿಂಕೆ ಮರಿಯನ್ನು ವಶಪಡಿಸಿಕೊಂಡಿದ್ದಾರೆ. ತೋಟದಲ್ಲಿ ಸಿಕ್ಕಿದ್ದ ಜಿಂಕೆ ಮರಿಯನ್ನು ಸಾಕಲು ಹೋಗಿ ಈಗ ತೋಟದ ಮಾಲೀಕರು ಪೇಚಿಗೆ ಸಿಲುಕಿದ್ದಾರೆ.

ಉಗುರು ಮಾರಾಟ ಆರೋಪಿ ಬಂಧನ: ಕಾಡು ಬೆಕ್ಕಿನ ಉಗುರು ಮಾರಾಟ ಮಾಡುತ್ತಿದ್ದ ಅರೋಪಿಯನ್ನ ಅರಣ್ಯ ಸಂಚಾರಿ ದಳ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ನಗರದ ಬೋಳಾರಾಮೇಶ್ವರ ದೇವಾಲಯ ಸಮೀಪ ಅಕ್ರಮವಾಗಿ ಕಾಡು ಬೆಂಕಿನ ಪಂಜಾ ಮತ್ತು ಹಲ್ಲು, ಉಗುರುಗಳನ್ನ ಮಾರಾಟ ಮಾಡುತ್ತಿದ್ದ ಮಾಹಿತಿ ಆಧರಿಸಿ ಅರಣ್ಯ ಸಂಚಾರಿ ದಳ‌ದ ಪೊಲೀಸರು ದಾಳಿ ಮಾಡಿ ಆರೋಪಿಯನ್ನ ಬಂಧಿಸಿದ್ದಾರೆ. ಈ ಸಂಬಂಧ ಅರಣ್ಯ ಸಂಚಾರಿ ದಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಡು ಬೆಕ್ಕಿನ ಉಗುರು
ಕಾಡು ಬೆಕ್ಕಿನ ಉಗುರು

ಚಿಕ್ಕಮಗಳೂರು ಅರಣ್ಯಾಧಿಕಾರಿ ಅಮಾನತು: ತಾಲೂಕಿನ ಆಲ್ದೂರು ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯಾಧಿಕಾರಿಯೊಬ್ಬರು ಅಕ್ರಮವಾಗಿ ಬೀಟೆ ಮರ ಕಡಿದು ಸಾಮಿಲ್​ಗೆ ಸಾಗಿಸಿರುವ ಆರೋಪ ಕೇಳಿಬಂದಿದೆ. ಅಕ್ರಮವಾಗಿ ಮರವನ್ನ ಕಡಿದು ಸಾಗಿಸಿದ ಆರೋಪ ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆ ಉಪವಲಯ ಅರಣ್ಯ ಅಧಿಕಾರಿ ದರ್ಶನ್ ಎಂಬುವರನ್ನು ಡಿಎಫ್​ಓ ಕ್ರಾಂತಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.‌

ಸ್ಥಳೀಯರಿಂದ ದೂರು: ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಬಸರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಆನಿಗನಹಳ್ಳಿ ಗ್ರಾಮದ ಮೀಸಲು ಅರಣ್ಯ ಪ್ರದೇಶದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಐದು ಬೀಟೆ ಮರಗಳನ್ನು ಕಡಿಯಲಾಗಿತ್ತು. ಈ ಬಗ್ಗೆ ಸ್ಥಳೀಯರು ವಲಯ ಅರಣ್ಯಾಧಿಕಾರಿ ಹಾಗೂ ಡಿಎಫ್​ಒಗೆ ದೂರು ನೀಡಿದ್ದರು.

ಬೀಟೆ ಮರ ಕಡಿದು ಸಾಮಿಲ್​ಗೆ ರವಾನೆ: ಇನ್ನು ಮರ ಕಡಿದವರು ಮತ್ತು ಗ್ರಾಮಸ್ಥರು ಮಾತನಾಡಿದ್ದ ಆಡಿಯೋ ಕೂಡ ವೈರಲ್ ಆಗಿತ್ತು. ಅರಣ್ಯಾಧಿಕಾರಿ ಹೇಳಿದ್ದಕ್ಕೆ ಮರ ಕಡಿದಿರುವುದಾಗಿ ಆಡಿಯೋದಲ್ಲಿ ಮರ ಕಡಿದವರು ಹೇಳಿದ್ದರು. ಸುಮಾರು 20 ರಿಂದ 25 ಮೀಟರ್ ಬೀಟೆ ಮರವನ್ನ ಕಡಿದು ಸ್ವಲ್ಪ ಮರವನ್ನ ಹಾಸನ ಜಿಲ್ಲೆ ಬೇಲೂರಿನ ಸಾಮಿಲ್​ಗೆ ರವಾನಿಸಿದ್ದರು. ಮತ್ತೊಂದಷ್ಟು ಮರವನ್ನ ಮನೆಗೆ ಪೀಠೋಪಕರಣ ಮಾಡಲು ಕಾರ್ಪೆಂಟರ್ ಮನೆಗೆ ಕಳುಹಿಸಿದ್ದರು ಎನ್ನಲಾಗಿದೆ.

ನಾಲ್ವರ ವಿರುದ್ಧ ಪ್ರಕರಣ ದಾಖಲು: ವಿಷಯ ತಿಳಿದ ಕೂಡಲೇ ತನಿಖೆಗೆ ಮುಂದಾದ ಅರಣ್ಯ ಅಧಿಕಾರಿಗಳಿಗೆ ಅಧಿಕಾರಿಯ ಅಕ್ರಮವಾಗಿ ಮರ ಕಡಿದು ಸಾಗಿಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಜೊತೆಗೆ ಅಕ್ರಮವಾಗಿ ಮರ ಕಡಿದ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ದರ್ಶನ್ ಫಾರೆಸ್ಟರ್ ಹೇಳಿದ್ದಕ್ಕೆ ಮರ ಕಡಿದು ಸಾಗಿಸಿದೆವು ಎಂದು ಒಪ್ಪಿಕೊಂಡಿದ್ದಾರೆ. ಹಾಗಾಗಿ ಹರೀಶ್, ಪ್ರದೀಪ್, ಮಂಜು ಹಾಗೂ ಬೇಲೂರಿನ ಮರದ ಸಾಮಿಲ್​ ಮಾಲೀಕ ಸಿರಾಜ್ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಜತೆಗೆ ಮರ ಕಡಿಸಿದ್ದರಿಂದ ಅರಣ್ಯಾಧಿಕಾರಿ ದರ್ಶನ್ ಮೇಲೆ ಇಲಾಖೆಗೆ ಕ್ರಮ ಕೈಗೊಂಡು ಅಮಾನತು ಮಾಡಲಾಗಿದೆ.

ವಲಯ ಅರಣ್ಯಾಧಿಕಾರಿ ಅಮಾನತು: ಇತ್ತೀಚೆಗೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ವಲಯ ಅರಣ್ಯಾಧಿಕಾರಿ ಶಿಲ್ಪಾ.ಎಸ್ ಎಲ್ ಅವರನ್ನು ಕರ್ತವ್ಯ ಲೋಪದ ಹಿನ್ನೆಲೆ ಅಮಾನತುಗೊಳಿಸಲಾಗಿದೆ. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜ್ ಕಿಶೋರ್ ಸಿಂಗ್ ಅಮಾನತು ಮಾಡಿ ಆದೇಶ ಹೊರಡಿಸಿದ್ದರು.

ಅಮಾನತಿಗೆ ಕಾರಣ?: ಕೆಲ ತಿಂಗಳ ಹಿಂದಷ್ಟೆ ಅಧಿಕಾರವಹಿಸಿಕೊಂಡಿದ್ದ ಶಿಲ್ಪಾ ತಮ್ಮ ಕಚೇರಿಯ ಸಿಬ್ಬಂದಿಯನ್ನು ನಿಯಂತ್ರಿಸುವಲ್ಲಿ ಮತ್ತು ಅರಣ್ಯ ಅಪರಾಧ ಪ್ರಕರಣಗಳ ತನಿಖೆ ನಡೆಸುವಲ್ಲಿ ವಿಫಲವಾಗಿದ್ದು, ಭೌತಿಕ ಹಾಗೂ ಆರ್ಥಿಕ ಪ್ರಗತಿ ಸಾಧಿಸುವಲ್ಲಿ ವೈಫಲ್ಯ ಹೊಂದಿದ್ದರು ಎನ್ನಲಾಗಿದೆ. ಅಲ್ಲದೇ, ಕಾಡಾನೆ ಸಮಸ್ಯೆಗೆ ಸಾರ್ವಜನಿಕರೊಂದಿಗೆ ಸಮನ್ವಯ ಸಾಧಿಸಿಕೊಂಡು ಪ್ರಾಣಿ ಮಾನವ ಸಂಘರ್ಷ ನಿಯಂತ್ರಿಸುವಲ್ಲಿ ವಿಫಲವಾಗಿದ್ದು, ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಇದರ ಜೊತೆಗೆ ಅಧಿಕಾರಿ, ಸಿಬ್ಬಂದಿ ವರ್ಗದವರ ನಡುವೆ ಭಿನ್ನಾಭಿಪ್ರಾಯ ಉಂಟಾದ ಕಾರಣ ಅಮಾನತು ಮಾಡಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ : ಬೀಟೆ ಮರ ಕಡಿದು ಸಾಗಿಸಿದ ಆರೋಪ: ಚಿಕ್ಕಮಗಳೂರು ಅರಣ್ಯಾಧಿಕಾರಿ ಅಮಾನತು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.