ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆಯಲ್ಲಿ ಸರ್ಕಾರಿ ಅಪರ ಅಭಿಯೋಜಕರ ಮೇಲೆ ಅಪರಿಚಿತರು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.
ಅಧಿಕಾರಿ ಸುರೇಶ್ ಚಂದ್ರ ಮೇಲೆ ಹಲ್ಲೆ ಮಾಡಲಾಗಿದ್ದು, ಅಪರಿಚಿತರು ನಗರದ ನ್ಯಾಯಾಲಯದ ಹೊರಭಾಗದಲ್ಲಿ ಕಲ್ಲಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಸದ್ಯ ಗಾಯಾಳು ಸುರೇಶ್ ಚಂದ್ರರನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ತರೀಕೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.