ಚಿಕ್ಕಮಗಳೂರು: ಬ್ಲ್ಯಾಕ್ ಫಂಗಸ್ಗೆ ತುತ್ತಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಗ್ರಾಮದ ನಿವಾಸಿ ತಮ್ಮಯ್ಯ(68) ಮೃತ ವ್ಯಕ್ತಿ.
ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ತಮ್ಮಯ್ಯ ಚಿಕಿತ್ಸೆ ಪಡೆಯುತ್ತಿದ್ದರು. 1 ತಿಂಗಳ ಹಿಂದೆ ಕೊರೊನಾದಿಂದ ಚೇತರಿಸಿಕೊಂಡಿದ್ದರು. ನಂತರ ಇವರಿಗೆ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿತ್ತು. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆ ಬಳಿಕ ಬ್ಲ್ಯಾಕ್ ಫಂಗಸ್ ಪತ್ತೆಯಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸೇರಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ರಾತ್ರಿ ತಮ್ಮಯ್ಯ ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ: ಕೌಟುಂಬಿಕ ಕಲಹ: ಖಾರದ ಪುಡಿ ಎರಚಿ ಮಲಗಿದ್ದವರ ಮೇಲೆ ಹಲ್ಲೆ