ಚಿಕ್ಕಮಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಚಿಕ್ಕಮಗಳೂರಿನಲ್ಲಿ ಬಂಧನ ಮಾಡಲಾಗಿದೆ.
ಬಸವನಹಳ್ಳಿ ಸಬ್ ಇನ್ಸ್ಪೆಕ್ಟರ್ ಸುತೇಶ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದ್ದು, ಬಂಧಿತನಿಂದ 2 ಕೆ.ಜಿ 250 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ನಗರದ ಬಸವನಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಗಾಂಜಾ ಸೊಪ್ಪು ಮನೆಯಿಂದ ತೆಗೆದುಕೊಂಡು ಹೋಗುವಾಗ ನಗರದ ಗೌರಿ ಕಾಲುವೆಯಲ್ಲಿ ದಾಳಿ ಮಾಡಲಾಗಿದೆ. ಹನೀಫ್ ಎಂಬ ಆರೋಪಿಯನ್ನು ಬಂಧಿಸಿದ್ದು, ಮನೆಯ ಪಕ್ಕದಲ್ಲಿ ಯುವಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ.
ಈ ಕುರಿತು ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಬಂಧಿತ ಆರೋಪಿಯಿಂದ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.