ETV Bharat / state

ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪಾಪಿ ಮಗ!

ಕಡೂರು ತಾಲೂಕಿನ ಮಾಚಗೊಂಡನಹಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಮಗನೇ ತಂದೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ. ಸಖರಾಯ ಪಟ್ಟಣ ಪೊಲೀಸರು ಆರೋಪಿ ಸತೀಶ್​ನನ್ನು ಬಂಧಿಸಿದ್ದಾರೆ.

a-son-murderd-his-father-in-chikkamagaluru
ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪಾಪಿ ಮಗ!
author img

By

Published : Jan 12, 2021, 1:58 PM IST

ಚಿಕ್ಕಮಗಳೂರು: ಕ್ಷುಲ್ಲಕ ಕಾರಣಕ್ಕೆ ಮಗನೋರ್ವ ತನ್ನ ತಂದೆಯನ್ನೇ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಪ್ರಕರಣ ಜಿಲ್ಲೆಯ ಕಡೂರು ತಾಲೂಕಿನ ಮಾಚಗೊಂಡನಹಳ್ಳಿಯಲ್ಲಿ ನಡೆದಿದೆ.

a-son-murderd-his-father-in-chikkamagaluru
ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪಾಪಿ ಮಗ!

ತಮ್ಮೇಗೌಡ (70) ಕೊಲೆಗೀಡಾಗಿರುವ ವೃದ್ಧ. ಖಾಸಗಿ ಬ್ಯಾಂಕ್​ನಿಂದ ತಮ್ಮೇಗೌಡರ ಪುತ್ರ ಸತೀಶ್ ಟ್ರ್ಯಾಕ್ಟರ್ ಸಾಲ ಪಡೆದಿದ್ದ. ಸಾಲ ಮರುಪಾವತಿ ಮಾಡದ ಹಿನ್ನೆಲೆ, ಬ್ಯಾಂಕ್ ಸಿಬ್ಬಂದಿ ಮನೆಗೆ ಬಂದಿದ್ದರು. ಈ ಬಗ್ಗೆ ತಂದೆ ತಮ್ಮೇಗೌಡ ತಮ್ಮ ಮಗನನ್ನು ಪ್ರಶ್ನಿಸಿದ್ದಾರೆ. ತಂದೆ ಪ್ರಶ್ನಿಸಿದ್ದರಿಂದ ಕುಪಿತಗೊಂಡ ಸತೀಶ್​, ಕಲ್ಲಿನಿಂದ ಜಜ್ಜಿ ತಂದೆಯನ್ನೇ ಕೊಲೆ ಮಾಡಿದ್ದಾನೆ.

ಸಖರಾಯ ಪಟ್ಟಣ ಪೊಲೀಸರು ಆರೋಪಿ ಸತೀಶ್​ನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.