ಚಿಕ್ಕಮಗಳೂರು: ನದಿಯಲ್ಲಿ ಈಜಲು ಹೋಗಿ ಯುವಕನೋರ್ವ ನೀರಿನಲ್ಲಿ ಮುಳಗಿ ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಹಾಲೂರು-ಕೂಡಿಗೆ ಗ್ರಾಮದಲ್ಲಿ ನಡೆದಿದೆ.
ಹಂಡುಗುಳಿ ಗ್ರಾಮದ ನಿವಾಸಿ ಗವಿರಾಜ್ (27) ಮೃತ ಯುವಕ. ತಾಲೂಕಿನ ಹೇಮಾವತಿ ನದಿಯಲ್ಲಿ ಈಜಲು ಹೋಗಿ ಯುವಕ ನೀರುಪಾಲು ಆಗಿದ್ದಾನೆ. ಮೊನ್ನೆಯಷ್ಟೇ ಯುವಕ ಬರ್ತ್‌ಡೇ ಆಚರಿಸಿಕೊಂಡಿದ್ದ ಎನ್ನಲಾಗಿದೆ. ಸ್ಥಳೀಯರು ಯುವಕನ ಮೃತ ದೇಹವನ್ನು ಹೊರ ತೆಗೆದಿದ್ದಾರೆ.
ಗೋಣಿಬೀಡು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.