ಚಿಕ್ಕಮಗಳೂರು: ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾದವರನ್ನು ತಕ್ಷಣವೇ ಬಂಧಿಸಿ ರಾಷ್ಟ್ರದ್ರೋಹದ ಪ್ರಕರಣ ದಾಖಲಿಸಬೇಕೆಂದು ಎಬಿವಿಪಿ ಸಂಘಟನೆ ವತಿಯಿಂದ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು.
ಐ.ಡಿ.ಎಸ್.ಜಿ ಕಾಲೇಜಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಎಬಿವಿಪಿ ವತಿಯಿಂದ ಸಹಿ ಸಂಗ್ರಹ ಅಭಿಯಾನವನ್ನು ಆಯೋಜಿಸಿದ್ದು, ಸುಮಾರು 300 ವಿದ್ಯಾರ್ಥಿಗಳ ಸಹಿ ಸಂಗ್ರಹಿಸಲಾಯಿತು. ವಿದ್ಯಾರ್ಥಿಗಳು ಮಾತ್ರವಲ್ಲದೆ ಕಾಲೇಜಿನ ಶಿಕ್ಷಕರರು, ಸಾರ್ವಜನಿಕರು ಅಭಿಯಾನದಲ್ಲಿ ಭಾಗವಹಿಸಿದ್ದರು.
ಈ ವೇಳೆ ಮಾದಕ ವಸ್ತುಗಳು ಮತ್ತು ಡ್ರಗ್ಸ್ ದಂಧೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿರುವ ಪ್ರಭಾವಿ ವ್ಯಕ್ತಿಗಳು ಹಾಗೂ ನಟ, ನಟಿಯರ ವಿರುದ್ಧ ಸೂಕ್ತ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಸಮಾಜದ ಸ್ವಾಸ್ಥ್ಯ ವನ್ನು ಕಾಪಾಡಬೇಕು ಎಂಬ ಉದ್ದೇಶದಿಂದ ಸಹಿ ಸಂಗ್ರಹ ಅಭಿಯಾನ ಆಯೋಜಿಸಲಾಗಿತ್ತು.