ETV Bharat / state

2 ಲಕ್ಷ ರೂ. ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಸಹಾಯಕ ಯೋಜನಾಧಿಕಾರಿ! - Chikmagalur Assistant Planning Officer shivakumar

ಎರಡು ಲಕ್ಷ ಹಣ ನೀಡುವಾಗ ನೇರವಾಗಿ ಸಿಕ್ಕಿ ಬಿದ್ದಿದ್ದು, ಎಸಿಬಿ ಅಧಿಕಾರಿಗಳು ಬ್ರೋಕರ್ ರಮೇಶ್ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಸಹಾಯಕ ಯೋಜನಾ ಅಧಿಕಾರಿ ಶಿವಕುಮಾರ್ ಇಬ್ಬರನ್ನೂ ಅರೆಸ್ಟ್ ಮಾಡಿದ್ದಾರೆ. ಎಸಿಬಿ ಇನ್ಸ್​ಪೆಕ್ಟರ್ ಅನಿಲ್ ರಾಥೋಡ್ ನೇತೃತ್ವದ ತಂಡ ದಾಳಿ ನಡೆಸಿತ್ತು..

Assistant Planning Officer shivakumar arrested
ಸಹಾಯಕ ಯೋಜನಾಧಿಕಾರಿ ಶಿವಕುಮಾರ್ ಅರೆಸ್ಟ್
author img

By

Published : Apr 9, 2022, 2:32 PM IST

ಚಿಕ್ಕಮಗಳೂರು : ಎರಡು ಲಕ್ಷ ರೂ. ಲಂಚ ಪಡೆಯುವ ವೇಳೆ ನಗರಾಭಿವೃದ್ಧಿ ಪ್ರಾಧಿಕಾರದ ಸಹಾಯಕ ಯೋಜನಾ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿರೋ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ಲೇಔಟ್ ನಿರ್ಮಾಣ ವಿಚಾರ ಸಂಬಂಧ ಕಚೇರಿ ಪಕ್ಕದಲ್ಲೇ ಗೋಪಿನಾಥ್ ಎಂಬುವರಿಂದ ಸಹಾಯಕ ಯೋಜನಾಧಿಕಾರಿ ಎಂ ಸಿ ಶಿವಕುಮಾರ್ ಎರಡು ಲಕ್ಷ ರೂ. ಹಣ ಪಡೆದುಕೊಳ್ಳುವಾಗ ಎಸಿಬಿ ಅಧಿಕಾರಿಗಳಿಗೆ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದಾರೆ.

ಇದನ್ನೂ ಓದಿ: ಶ್ರೀರಾಮನ ಶೋಭಾಯಾತ್ರೆ ಮೇಲೆ ಕಲ್ಲು ತೂರಿದ ಕಿಡಿಗೇಡಿಗಳು.. ಬೂದಿ ಮುಚ್ಚಿದ ಕೆಂಡದಂತಾಯ್ತು ಕೋಲಾರ

ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಲೇಔಟ್ ನಿರ್ಮಾಣದ ಸಂಬಂಧ ಎಂಟು ಲಕ್ಷಕ್ಕೆ ಮಾತುಕತೆ ಮಾಡಿಕೊಂಡು ಮುಂಗಡವಾಗಿ 2 ಲಕ್ಷ ಹಣ ಪಡೆದುಕೊಳ್ಳುವಾಗ ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿದ್ದಾರೆ. ದೂರುದಾರ ಗೋಪಿನಾಥ್ ಬ್ರೋಕರ್ ರಮೇಶ್ ಎಂಬುವರ ಮೂಲಕ ಶಿವಕುಮಾರರ್​ ಅವರನ್ನು ಭೇಟಿ ಮಾಡಿದ್ದರು.

ಎರಡು ಲಕ್ಷ ಹಣ ನೀಡುವಾಗ ನೇರವಾಗಿ ಸಿಕ್ಕಿ ಬಿದ್ದಿದ್ದು, ಎಸಿಬಿ ಅಧಿಕಾರಿಗಳು ಬ್ರೋಕರ್ ರಮೇಶ್ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಸಹಾಯಕ ಯೋಜನಾ ಅಧಿಕಾರಿ ಶಿವಕುಮಾರ್ ಇಬ್ಬರನ್ನೂ ಅರೆಸ್ಟ್ ಮಾಡಿದ್ದಾರೆ. ಎಸಿಬಿ ಇನ್ಸ್​ಪೆಕ್ಟರ್ ಅನಿಲ್ ರಾಥೋಡ್ ನೇತೃತ್ವದ ತಂಡ ದಾಳಿ ನಡೆಸಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.