ಚಿಕ್ಕಮಗಳೂರು: ಸ್ಕೂಟಿಯಲ್ಲಿ ಹೋಗುತ್ತಿದ್ದವರಿಗೆ ವೇಗವಾಗಿ ಬಂದ ಬೈಕ್ ಸವಾರನೋರ್ವ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕು ಬಾಳೆಹೊನ್ನೂರಿನಲ್ಲಿ ನಡೆದಿದೆ.
ಬಾಳೆಹೊನ್ನೂರಿನ ಕಗ್ಗಿನ ಗದ್ದೆಯಲ್ಲಿ ಈ ಅಪಘಾತ ಸಂಭವಿಸಿದೆ. ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟಿ ಮತ್ತು ಬೈಕ್ ಸವಾರರು ರಸ್ತೆಗೆ ಬಿದ್ದಿದ್ದು, ಮೂವರಿಗೂ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಾಳೆಹೊನ್ನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.