ETV Bharat / state

ಟಿಪ್ಪರ್ ​​- ಬೈಕ್​ ನಡುವೆ ಭೀಕರ ಅಪಘಾತ: ಬೀರೂರಿನ ಇಬ್ಬರು ಬೈಕ್​ ಸವಾರರ ಸಾವು - bike tippar accident

ಬೈಕ್​​ ಹಾಗೂ ಟಿಪ್ಪರ್​ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್​ ಸವಾರ ಅಜ್ಜ ಮತ್ತು ಮೊಮ್ಮಗ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನೂ ಲಾರಿಯಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಯಿಂದ ಎರಡು ವಾಹನಗಳು ನಜ್ಜುಗುಜ್ಜಾಗಿದ್ದು, ಬೀರೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Accident Between Tipper-Bike: Bike Rider Dies in Kadur
ಟಿಪ್ಪರ್​​-ಬೈಕ್​ ನಡುವೆ ಭೀಕರ ಅಪಘಾತ: ಇಬ್ಬರು ಬೈಕ್​ ಸವಾರರು ಮೃತ್ಯು
author img

By

Published : May 25, 2020, 9:14 PM IST

ಚಿಕ್ಕಮಗಳೂರು: ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಅಜ್ಜ ಹಾಗೂ ಮೊಮ್ಮಗ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಇಲ್ಲಿನ ಕಡೂರು ತಾಲೂಕಿನ ಬೀರೂರು ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಘಟನೆ ನಡೆದಿದ್ದು, ವೇಗವಾಗಿ ಬರುತ್ತಿದ್ದ ಟಿಪ್ಪರ್​​​​​​​ಗೆ ಬೈಕ್​​ಗೆ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್​​ನಲ್ಲಿದ್ದ ಇಬ್ಬರೂ ಮೃತಪಟ್ಟಿದ್ದಾರೆ.

ನಂತರ ರಸ್ತೆಯ ಪಕ್ಕದಲ್ಲಿದ್ದ ಮರಕ್ಕೆ ಟಿಪ್ಪರ್ ಹೋಗಿ ಗುದ್ದಿದ್ದು ಈ ಘಟನೆಯಲ್ಲಿ ಮಲ್ಲಪ್ಪ (57) ಉತ್ಸವ್ (11) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಮೃತ ದುರ್ದೈವಿಗಳು ಬೀರೂರಿನ ಬಳಿಗನೂರು ಗ್ರಾಮದವರಾಗಿದ್ದು, ಲಾರಿಯಲ್ಲಿದ್ದ ಇಬ್ಬರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಬೀರೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.