ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಇಬ್ಬನಿ ಕೆಫೆ ಬಳಿ ಈ ಅಫಘಾತ ಸಂಭವಿಸಿದ್ದು, ಮಹೇಂದ್ರ ಜಿತೋ ಪ್ಯಾಸೆಂಜರ್ ವಾಹನ ಹಾಗೂ ಸ್ವಿಫ್ಟ್ ಕಾರಿನ ನಡುವೆ ಅಪಘಾತವಾಗಿದೆ.
ಮಹೇಂದ್ರ ಜಿತೋ ವಾಹನ ಮೂಡಿಗೆರೆಯಿಂದ ಮಂಗಳೂರಿನ ಕಡೆ ಹೋಗುತ್ತಿತ್ತು. ಸ್ವಿಫ್ಟ್ ಕಾರಿನಲ್ಲಿದ್ದ ಪ್ರಯಾಣಿಕರು ಧರ್ಮಸ್ಥಳಕ್ಕೆ ಹೋಗಿ ಬೆಂಗಳೂರಿನ ಕಡೆ ಹೋಗುತ್ತಿದ್ದ ವೇಳೆ ಈ ದುರಂತ ನಡೆದಿದೆ. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಐದು ಜನ ಗಾಯಾಳುಗಳನ್ನು ಸ್ಥಳೀಯ ಆಸ್ವತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದ್ದು ಬಣಕಲ್ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.