ಚಿಕ್ಕಮಗಳೂರು: ಕ್ಯಾಂಟೀನ್ನಲ್ಲಿ ಇಬ್ಬರಿಗೆ ಚೂರಿ ಇರಿದು ಬರೋಬ್ಬರಿ 17 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖದಲ್ಲಿ ಈ ಪ್ರಕರಣ ನಡೆದಿತ್ತು. ಕೊನೆಗೂ ಕೇರಳದಲ್ಲಿ ಆರೋಪಿ ಅಲೆಕ್ಸಾಂಡರ್ನನ್ನು ಚಿಕ್ಕಮಗಳೂರು ಪೊಲೀಸರು ಬಂಧನ ಮಾಡಿದ್ದಾರೆ.
ನ್ಯಾಯಾಲಯಕ್ಕೆ ಹಾಜರಾಗದೇ ಈ ಆರೋಪಿ ತಲೆಮರೆಸಿಕೊಂಡಿದ್ದ. ಈತನ ಮೇಲೆ ಐಪಿಸಿ 307, 506, 324, 143, 147, 148ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.