ETV Bharat / state

ಜ್ಯುವೆಲ್ಲರಿ ಅಂಗಡಿಯಲ್ಲಿ ಬ್ಯಾಗ್​ ಕದ್ದ ಕಳ್ಳರು ಅರೆಸ್ಟ್​ ; ಸಿಸಿ ಟಿವಿ ದೃಶ್ಯ - ಚಿಕ್ಕಮಗಳೂರು ಸುದ್ದಿ

ಪ್ರಕರಣವನ್ನು ಕೈಗೆತ್ತಿಕೊಂಡ ಪೊಲೀಸರು ಇಬ್ಬರು ಆರೋಪಿಗಳಾದ ಆಲಿ ಹಾಗೂ ಪರ್ವೀನ್ ಎಂಬ ಆರೋಪಿಗಳನ್ನು ಬಂಧಿಸಿದ್ದರು. ಬಂಧಿತರಿಂದ 61 ಸಾವಿರ ರೂ. ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಹಾಗೂ ಮೊಬೈಲ್​ ವಶಕ್ಕೆ ಪಡೆದಿದ್ದಾರೆ..

accused arrested
ಕಳ್ಳರು ಅರೆಸ್ಟ್​
author img

By

Published : Sep 22, 2020, 4:41 PM IST

ಚಿಕ್ಕಮಗಳೂರು : ಹಾಡಹಗಲೇ ಜ್ಯುವೆಲ್ಲರಿ ಅಂಗಡಿಯಲ್ಲಿ ಕಳ್ಳತನ ಮಾಡಿದ ಇಬ್ಬರು ಆರೋಪಿಗಳನ್ನು ಚಿಕ್ಕಮಗಳೂರು ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಗಿಡ್ಡೇನಹಳ್ಳಿ ಗ್ರಾಮದ ಮೋಹನ್‌ಕುಮಾರ್ ಎಂಬುವರು ತಮ್ಮ ಕುಟುಂಬದ ಸದಸ್ಯರೊಂದಿಗೆ ನಗರದ ಎಂಜಿರಸ್ತೆಯಲ್ಲಿರುವ ಕಾಮಧೇನು ಜುವೆಲ್ಲರಿ ಶಾಪ್‌ನಲ್ಲಿ ಚಿನ್ನಾಭರಣಗಳನ್ನು ಖರೀದಿ ಮಾಡುತ್ತಿದ್ದರು. ಆ ವೇಳೆ ಅಲ್ಲಿಗೆ ಬಂದ ಇಬ್ಬರು ಕಳ್ಳರು ಅವರ ವ್ಯಾನಿಟಿ ಬ್ಯಾಗ್ ಕಳ್ಳತನ ಮಾಡಿಕೊಂಡು ಹೋಗಿರುವುದು ಸಿಸಿ ಟಿವಿಯಲ್ಲಿ ಪತ್ತೆಯಾಗಿದೆ.

ಈ ಕುರಿತು ಮೋಹನ್‌ಕುಮಾರ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣವನ್ನು ಕೈಗೆತ್ತಿಕೊಂಡ ಪೊಲೀಸರು ಇಬ್ಬರು ಆರೋಪಿಗಳಾದ ಆಲಿ ಹಾಗೂ ಪರ್ವೀನ್ ಎಂಬ ಆರೋಪಿಗಳನ್ನು ಬಂಧಿಸಿದ್ದರು. ಬಂಧಿತರಿಂದ 61 ಸಾವಿರ ರೂ. ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಹಾಗೂ ಮೊಬೈಲ್​ ವಶಕ್ಕೆ ಪಡೆದಿದ್ದಾರೆ.

ಕಳ್ಳರು ಅರೆಸ್ಟ್​

ಬಂಧಿತ ಆರೋಪಿಗಳನ್ನು ಹೆಚ್ಚಿನ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.