ಚಿಕ್ಕಮಗಳೂರು: ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯನ್ನು ಬಂಧಿಸುವಲ್ಲಿ ಗೋಣಿಬೀಡು ಪೊಲೀಸರು ಯಶಸ್ವಿಯಾಗಿದ್ದಾರೆ. ದೇವರಾಜ್ ಬಂಧಿತ ಆರೋಪಿಯಾಗಿದ್ದಾನೆ.
ವಿದ್ಯಾರ್ಥಿನಿ ಮೂಡಿಗೆರೆ ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿನಿಗೆ ಪರಿಚಿತನಾದ ಕಾರಣ ಆರೋಪಿಯು ಡ್ರಾಪ್ ಕೊಡುವ ನೆಪದಲ್ಲಿ ಸ್ಕೂಟಿಯಲ್ಲಿ ಕೂರಿಸಿಕೊಂಡು ತೆರಳಿದ್ದಾನೆ. ಆ ವೇಳೆ, ಅನುಚಿತವಾಗಿ ವರ್ತಿಸಿ ರಸ್ತೆಯ ಮಧ್ಯೆ ನಿಲ್ಲಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ತಕ್ಷಣ ಮನೆಯವರಿಗೆ ವಿದ್ಯಾರ್ಥಿನಿ ವಿಷಯ ತಿಳಿಸಿದ್ದು, ಕೂಡಲೇ ಪೋಷಕರು ಗೋಣಿಬೀಡು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಇದನ್ನೂ ಓದಿ: ಪಠ್ಯ ಪುಸ್ತಕ ಪರಿಷ್ಕರಣೆ ಇಲ್ಲ, ಬರಗೂರು ನೀಡಿದ ಪಠ್ಯವನ್ನೇ ಮುಂದುವರೆಸುತ್ತೇವೆ : ಸಚಿವ ನಾಗೇಶ್
ಪ್ರಕರಣ ದಾಖಲಾಗುತ್ತಿದ್ದಂತೆ ಗೋಣಿಬೀಡು ಪೊಲೀಸ್ ಠಾಣಾಧಿಕಾರಿ ಧನಂಜಯ್ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಈ ಬಗ್ಗೆ ವಿಚಾರ ತಿಳಿದ ಕೂಡಲೇ ಕೆಂಪೇಗೌಡ ಒಕ್ಕಲಿಗರ ಸಂಘದ ವತಿಯಿಂದ ಗೋಣಿಬೀಡು ಠಾಣಾಧಿಕಾರಿಗಳಿಗೆ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕೆಂದು ಮನವಿ ಮಾಡಿದ್ದಾರೆ. ತನಿಖೆ ಮುಂದುವರಿದಿದೆ.