ಚಿಕ್ಕಮಗಳೂರು : ಜಿಲ್ಲೆಯ ಶೃಂಗೇರಿಯಲ್ಲಿ ಕೆಲ ಕಿಡಿಗೇಡಿಗಳು ಕೋಮು ಸಾಮರಸ್ಯ ಕದಡುವ ಕೃತ್ಯವೆಸಗಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.
ನಗರದಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಇದರ ವಿರುದ್ಧ ಮತ್ತೊಂದು ಕೋಮಿನ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಮಾಜದ ಶಾಂತಿ ಕದಡುವ ಕೃತ್ಯ ಎಸಗಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ.
ಈ ವಿಚಾರವಾಗಿ ಮಾಜಿ ಸಚಿವ ಡಿ ಎನ್ ಜೀವರಾಜ್ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೂಡಲೇ ಕೃತ್ಯ ಎಸಗಿರುವ ಕಿಡಿಗೇಡಿಗಳನ್ನು ಬಂಧಿಸಬೇಕು, ಹಾಗೂ ಅವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಬೆಂಗಳೂರಿನ ಡಿ ಜೆ ಹಳ್ಳಿ ಪ್ರಕರಣ ಇನ್ನೂ ಹಸಿ ಇರುವಾಗಲೇ, ಕೋಮು ಸಾಮರಸ್ಯಕ್ಕೆ ಧಕ್ಕೆ ಬರುವಂತಹ ಘಟನೆ ಕಾಫಿನಾಡಿನಲ್ಲಿ ನಡೆದಿರುವುದು ವಿಷಾದನೀಯ.