ಚಿಕ್ಕಮಗಳೂರು: ಜಿಲ್ಲೆಯಲ್ಲಿ ದತ್ತ ಜಯಂತಿ ನಿಮಿತ್ತ ಬೃಹತ್ ಶೋಭ ಯಾತ್ರೆ ನಡೆಯುತ್ತಿದ್ದು, ಜಿಲ್ಲಾದ್ಯಂತ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಗಡಿ ವಿವಾದ ಹಿನ್ನೆಲೆ ಬೆಳಗಾವಿಯಲ್ಲೂ ಕಟ್ಟೆಚ್ಚರ ವಹಿಸಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.
ಈ ಕುರಿತು ಮಾತನಾಡಿದ ಅವರು, ಬೆಳಗಾವಿ ಭಾಗದಲ್ಲಿ ಯಾವುದೇ ಅಹಿತಕರ ಘಟನೆ ನಡೆಯಲು ಬಿಟ್ಟಿಲ್ಲ. ಕಳೆದ 10 ದಿನಗಳಿಂದ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದೇವೆ. ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್ಗೆ ಕಲ್ಲು ಹೊಡೆದು ಮಸಿ ಹಚ್ಚಿದ್ದ ತಕ್ಷಣವೇ ಗಡಿ ಜಿಲ್ಲೆಯಲ್ಲಿ ಭದ್ರತೆ ಮಾಡಲಾಗಿದ್ದು, ಅಲ್ಲಿನ ಪರಿಸ್ಥಿತಿ ಮೇಲೆ ನಿಗಾ ವಹಿಸಿದ್ದೇವೆ ಎಂದರು. ನಾನು ಇಲ್ಲಿದ್ದರೂ ಕೂಡ ಅಲ್ಲಿಯ ಪರಿಸ್ಥಿತಿ ಅವಲೋಕನ ಮಾಡುತ್ತಿದ್ದೇನೆ ಎಂದು ಅಲೋಕ್ ಕುಮಾರ್ ಹೇಳಿದರು.
ಇದನ್ನೂ ಓದಿ: ಅನುಸೂಯಾ ಜಯಂತಿ: ದತ್ತಪೀಠಕ್ಕೆ ಸಾವಿರಾರು ಭಕ್ತರ ಆಗಮನ