ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದ್ದು, ಜನರು ಆತಂಕದಲ್ಲಿದ್ದಾರೆ.
ಜಿಲ್ಲೆಯ ಮೂಡಿಗೆರೆ ಹಾಗೂ ಕಳಸ ತಾಲೂಕಿನಲ್ಲಿ ರಾತ್ರಿ ಇಡೀ ಸುರಿದ ಧಾರಾಕಾರ ಮಳೆಯಿಂದಾಗಿ ಅಡಿಕೆ ತೋಟಗಳು ಜಲಾವೃತವಾಗಿದೆ. ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಆಗಸ್ಟ್ ತಿಂಗಳಲ್ಲಿ ಉಂಟಾದ ಪ್ರವಾಹ, ಗುಡ್ಡಕುಸಿತದ ಪರಿಣಾಮದಿಂದಾದ ಹಾನಿಗೆ ಜಿಲ್ಲೆ ಬೆಚ್ಚಿಬಿದ್ದಿತ್ತು. ಮನೆ-ಮಠ ಕಳೆದುಕೊಂಡು ಬೀದಿಗೆ ಬಿದ್ದ ಕುಟುಂಬಗಳಿನ್ನೂ ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಇದೀಗ ಮತ್ತೆ ಮಳೆರಾಯ ತನ್ನ ಆರ್ಭಟ ಶುರು ಮಾಡಿದ್ದು, ಇನ್ನೇನು ಅವಾಂತರ ಸೃಷ್ಟಿ ಮಾಡುತ್ತೋ ಎಂದು ಜನರು ಭಯಗೊಂಡಿದ್ದಾರೆ.