ಚಿಕ್ಕಮಗಳೂರು : ಮರಗಳ್ಳತನದ ಬಗ್ಗೆ ಮಾಹಿತಿ ಕೊಟ್ಟಿದ್ದಾನೆ ಎಂದು ಶಂಕೆ ವ್ಯಕ್ತಪಡಿಸಿ ಯುವಕನ ಮೇಲೆ ಇಬ್ಬರು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಕೆಸವಿನಮನೆ ಗ್ರಾಮದಲ್ಲಿ ನಡೆದಿದೆ.
ಆದರ್ಶ್ ಹಲ್ಲೆಗೊಳಗಾದ ಯುವಕ. ಈತ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇನ್ನು ರಾಜೇಶ್, ರಮೇಶ್ ಎಂಬುವವರು ತಮ್ಮ ಮಗನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕುಟುಂಬಸ್ಥರು ದೂರಿದ್ದಾರೆ.
ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದೆ.