ಚಿಕ್ಕಮಗಳೂರು: ಅನ್ಯ ಧರ್ಮಿಯರು ಮತಾಂತರ ನಡೆಸುವ ಸಂದರ್ಭದಲ್ಲಿ ಬಜರಂಗದಳದ ಕಾರ್ಯಕರ್ತರು ಸ್ಥಳಕ್ಕೆ ತೆರಳಿ, ದಾಳಿ ನಡೆಸಿರುವ ಘಟನೆ ನಗರದಲ್ಲಿ ನಡೆದಿದೆ. ಚಿಕ್ಕಮಗಳೂರಿನ ಖಾಸಗಿ ಹೋಟೆಲೊಂದರಲ್ಲಿ ಮತಾಂತರ ನಡೆಯುತ್ತಿತ್ತು ಎನ್ನಲಾಗ್ತಿದೆ. ಅಮಾಯಕರನ್ನು ಇಲ್ಲಿಗೆ ಕರೆದುಕೊಂಡು ಬಂದು ಅಕ್ರಮವಾಗಿ ಮತಾಂತರ ನಡೆಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ.
ದಾಳಿ ನಡೆಸಿರುವ ಬಜರಂಗದಳ ಕಾರ್ಯಕರ್ತರು ಧರ್ಮದ ಕುರಿತಾಗಿ ಬೋಧನೆ ನಡೆಸುತ್ತಿದ್ದೀರಲ್ಲ ನಿಮಗೆ ಅನುಮತಿ ನೀಡಿದವರು ಯಾರು? ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಬಜರಂಗದಳ ಕಾರ್ಯಕರ್ತರು ಹಾಗೂ ಮತಾಂತರ ಮಾಡುತ್ತಿದ್ದವರ ನಡುವೆ ವಾಗ್ವಾದ ನಡೆದಿದೆ. ನಂತರ ಸ್ಥಳಕ್ಕಾಗಮಿಸಿದ ಚಿಕ್ಕಮಗಳೂರು ನಗರ ಠಾಣೆಯ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ.
ಅನುಮತಿ ಇಲ್ಲದೆ ಸಭೆ ನಡೆಸಲಾಗುತ್ತಿದೆ. ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಬಜರಂಗದಳ ಕಾರ್ಯಕರ್ತರು ಆರೋಪಿಸಿದ್ದಾರೆ.
ಇದನ್ನೂ ಓದಿ: ಪತಿಯ ಜತೆ ಸಲುಗೆ ಬೆಳೆಸಿಕೊಂಡಿದ್ದಕ್ಕೆ ಯುವತಿ ಮೇಲೆ ಹಲ್ಲೆ.. ಲೈಂಗಿಕ ದೌರ್ಜನ್ಯ ನಡೆಸಿದ ಮಹಿಳೆ..