ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಕೊಟ್ಟಿಗೆ ಪಟ್ಟಣದಲ್ಲಿ ವಾರದಿಂದ ಬಿದ್ದಲ್ಲೇ ಬಿದ್ದು ನರಳುತ್ತಿರುವ ವ್ಯಕ್ತಿಯ ಬಗ್ಗೆ ಸಾರ್ವಜನಿಕರು ಸಮಾಜ ಸೇವಕ ಆರೀಫ್ ಅವರ ಗಮನಕ್ಕೆ ತಂದಿದ್ದಾರೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ಆರೀಫ್, ಆ ವ್ಯಕ್ತಿಯ ಬಳಿ ಬಂದು ವಿವರಣೆ ಪಡೆದುಕೊಂಡಿದ್ದಾರೆ. ಈತ ಅನಾಥನಾಗಿದ್ದು, ಕೇರಳದಿಂದ ಇಲ್ಲಿಗೆ ಬಂದಿದ್ದಾರೆ ಎಂದು ಹೇಳಿದ್ದಾರೆ.
ನಂತರ ಆ ಭಾಗಕ್ಕೆ ಸಂಪೂರ್ಣ ಚಿಕಿತ್ಸೆ ನೀಡಿ ಆತನಿಗೆ ಬಟ್ಟೆಯನ್ನು ತೊಡಿಸಿ ಆತನ ಊರಾದ ಕೇರಳಕ್ಕೆ ಕಳುಹಿಸಿಕೊಟ್ಟಿದ್ದಾರೆ. ಆರೀಫ್ ಅವರ ಸೇವೆಗೆ ಸ್ಥಳೀಯರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.