ETV Bharat / state

ಚಿಕ್ಕಮಗಳೂರು: ಹುಲಿ ಉಗುರು ಧರಿಸಿದ್ದ ಆರೋಪದಡಿ ಮತ್ತಿಬ್ಬರ ಬಂಧನ - ಈಟಿವಿ ಭಾರತ ಕರ್ನಾಟಕ

ಅರಣ್ಯ ಇಲಾಖೆ ಅಧಿಕಾರಿಗಳು ಹುಲಿ ಉಗುರು ಧರಿಸಿದ್ದ ಆರೋಪದಡಿ ಇಬ್ಬರನ್ನು ಬಂಧಿಸಿದ್ದಾರೆ.

arrest-of-two-accused-who-wearing-tiger-claws-in-chikkamagaluru
ಚಿಕ್ಕಮಗಳೂರು: ಹುಲಿ ಉಗುರು ಧರಿಸಿದ್ದ ಸಂಬಂಧ ಮತ್ತಿಬ್ಬರ ಬಂಧನ
author img

By ETV Bharat Karnataka Team

Published : Oct 24, 2023, 9:23 PM IST

ಚಿಕ್ಕಮಗಳೂರು: ಹುಲಿ ಉಗುರು ಧರಿಸಿದ್ದ ಆರೋಪದಡಿ ಮೂಡಿಗೆರೆ ತಾಲೂಕಿನ ಇಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ತಾಲೂಕಿನ ಬಿ.ಹೊಸಳ್ಳಿಯ ಕುಂಡ್ರ ನಿವಾಸಿ ಸತೀಶ್ ಮತ್ತು ಹುಲ್ಲೇ ಮನೆ ಕುಂದೂರು ನಿವಾಸಿ ರಂಜಿತ್ ಬಂಧಿತರು. ಹುಲಿ ಉಗುರು ಧರಿಸಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ ಮೂಡಿಗೆರೆ ಕಡೆಯಿಂದ ಚಿಕ್ಕಮಗಳೂರಿಗೆ ಪ್ರಯಾಣಿಸುತ್ತಿದ್ದ ಸತೀಶ್‌ನನ್ನು ಚಿಕ್ಕಮಗಳೂರು ಸಮೀಪದ ಮತ್ತಾವರ ಅರಣ್ಯ ಮಾಹಿತಿ ಕೇಂದ್ರದ ಬಳಿ ತಡೆದು ಬಂಧಿಸಿದ್ದಾರೆ.

ಸತೀಶ್ ಕುತ್ತಿಗೆಗೆ ಧರಿಸಿದ್ದ ಬೆಳ್ಳಿ ಸರದಲ್ಲಿ ಹುಲಿ ಉಗುರು ಇರುವುದು ಪತ್ತೆಯಾಗಿದೆ. ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಹುಲಿ ಉಗುರನ್ನು ತನಗೆ ಮೂಡಿಗೆರೆ ತಾಲೂಕಿನ ಹುಲ್ಲೇ ಮನೆ ಕುಂದೂರು ನಿವಾಸಿ ರಂಜಿತ್ ನೀಡಿದ್ದು ಎಂದು ಮಾಹಿತಿ ನೀಡಿದ್ದಾನೆ. ನಂತರ ರಂಜಿತ್‌ನನ್ನು ಹುಲ್ಲೇ ಮನೆಯ ನಿವಾಸದಲ್ಲಿ ಅರಣ್ಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿ ಆತ ಕೊಪ್ಪದ ಆದರ್ಶ ಮತ್ತು ಆಲ್ದೂರು ಸಮೀಪದ ಕೋಣನ ಬಸರಿ ಮಣಿ ಎಂಬವರ ಹೆಸರು ಹೇಳಿದ್ದಾನೆ ಎಂದು ಅರಣ್ಯ ಇಲಾಖೆಯ ಮೂಲಗಳು ತಿಳಿಸಿವೆ.

arrest of two accused who wearing tiger claws in chikkamagaluru
ಆರೋಪಿ ಸತೀಶ್ ಸರದಲ್ಲಿ ಹುಲಿ ಉಗುರು

ವಿಷಯ ತಿಳಿದು ಆದರ್ಶ ಮತ್ತು ಮಣಿ ತಲೆ ಮರೆಸಿಕೊಂಡಿದ್ದು, ಅವರುಗಳ ಬಂಧನಕ್ಕೆ ಅರಣ್ಯ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ. ಬಂಧಿತ ಇಬ್ಬರು ಆರೊಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹುಲಿ ಉಗುರು ಪ್ರಕರಣದಲ್ಲಿ ದೊಡ್ಡ ಜಾಲವೇ ಇರುವುದು ಕಂಡು ಬರುತ್ತಿದ್ದು, ಇವರುಗಳಿಗೆ ಹುಲಿ ಉಗುರು ಎಲ್ಲಿಂದ ಸಿಕ್ಕಿತು?, ಇದರ ಹಿಂದೆ ಯಾರೆಲ್ಲಾ ಇದ್ದಾರೆ? ಎಂಬುದರ ಬಗ್ಗೆ ಅರಣ್ಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಚಿಕ್ಕಮಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಬಾಬು ಹಾಗೂ ಮೂಡಿಗೆರೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಡಿ.ರಘು ನಿರ್ದೇಶನದ ಮೇರೆಗೆ ಕಾರ್ಯಾಚರಣೆ ನಡೆದಿದೆ.

ವರ್ತೂರು ಸಂತೋಷ್​​ ಪ್ರಕರಣ: ಮತ್ತೊಂದೆಡೆ, ಹುಲಿ ಉಗುರಿನ ಡಾಲರ್ ಧರಿಸಿದ್ದ ಆರೋಪದಡಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ವರ್ತೂರು ಸಂತೋಷ್​ಗೆ ಸೋಮವಾರ 14 ದಿನ (ನ.6 ವರೆಗೆ) ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ವ್ಯಕ್ತಿಯೊಬ್ಬರು ದೂರು ನೀಡಿದ ಆಧಾರದ ಮೇರೆಗೆ ರಾಜರಾಜೇಶ್ವರಿ ನಗರದ ಬಳಿ ರಿಯಾಲಿಟಿ ಶೋ ನಡೆಯುತ್ತಿದ್ದ ಬಿಗ್‌ಬಾಸ್​ ಮನೆಗೆ ಭಾನುವಾರ ರಾತ್ರಿ ತೆರಳಿದ್ದ ಅರಣ್ಯಾಧಿಕಾರಿಗಳು ಸಂತೋಷ್ ಅವರನ್ನು ವಶಕ್ಕೆ ಪಡೆದಿದ್ದರು. ಸದ್ಯ ವರ್ತೂರು ಸಂತೋಷ್​ನನ್ನು​ ಅರಣ್ಯಾಧಿಕಾರಿಗಳು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಿಂದಲೇ ವರ್ತೂರು​ ಸಂತೋಷ್​ ಅರೆಸ್ಟ್​​.. ಕಾರಣವೇನು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.