ಚಿಕ್ಕಮಗಳೂರು: ಅಕ್ರಮವಾಗಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಗರದ ಎಐಟಿ ವೃತ್ತದಲ್ಲಿ ದರ್ಶನ್ ಮತ್ತು ರಘು ಎಂಬುವವರು ಮಾದಕ ದ್ರವ್ಯ ಸೇಲ್ ಮಾಡುತ್ತಿದ್ದರು. ಈ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಬಂಧಿತರಿಂದ 250 ಗ್ರಾಂ ತೂಕದ ಗಾಂಜಾ ಸೊಪ್ಪು ಹಾಗೂ ಒಂದು ಬೈಕ್ ವಶಪಡಿಸಿಕೊಳ್ಳಲಾಗಿದೆ. ಈ ಆರೋಪಿಗಳಿಗೆ ಗಾಂಜಾ ಸೊಪ್ಪನ್ನು ನೀಡಿದ್ದ ಆಲ್ದೂರಿನ ಮೊಹಮ್ಮದ್ ಇಮ್ರಾನ್ ಹಾಗೂ ಬಂಧಿತ ಅರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.