ETV Bharat / state

ಸಮರ್ಪಕ ವಿದ್ಯುತ್​ ಕೊಡ್ತಿಲ್ಲ ಎಂದು ಮೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ - ಚಿಕ್ಕಮಗಳೂರಿನಲ್ಲಿ ಮೆಸ್ಕಾಂ ಸಿಬ್ಬಂದಿ ಮೇಲೆ ದಾಳಿ

ಸಮರ್ಪಕವಾಗಿ ವಿದ್ಯುತ್​ ನೀಡುತ್ತಿಲ್ಲ ಎಂದು ಹೇಳಿ ಮೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಲಾಗಿದೆ. ಇದರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

Assault on mescom staff
ಚಿಕ್ಕಮಗಳೂರಿನಲ್ಲಿ ಮೆಸ್ಕಾಂ ಸಿಬ್ಬಂದಿ ಮೇಲೆ ದಾಳಿ
author img

By

Published : May 21, 2022, 4:45 PM IST

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಕಂಡು ಬಂದಿದೆ. ಇದೇ ಕಾರಣಕ್ಕೆ ಮೆಸ್ಕಾಂ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ನಾಲ್ಕು ಜನರ ಮೇಲೆ ಎಫ್​ಐಆರ್​ ದಾಖಲು ಮಾಡಲಾಗಿದೆ.

ಮೂಡಿಗೆರೆ ತಾಲೂಕಿನ ಹಿರೇಬೈಲ್​ನಲ್ಲಿ ಐದಾರು ಜನರು ಕೂಡಿಕೊಂಡು ಮೆಸ್ಕಾಂ ಸಿಬ್ಬಂದಿ ಹೇಮಂತ್ ಕುಮಾರ್ ಎಂಬುವವರ ಮೇಲೆ ಹಲ್ಲೆ ನಡೆಸಲಾಗಿದ್ದು, ಇದರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಸಮರ್ಪಕವಾಗಿ ವಿದ್ಯುತ್​ ನೀಡುತ್ತಿಲ್ಲ ಎಂದು ಹೇಳಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಹೇಳಲಾಗಿದೆ.

ಚಿಕ್ಕಮಗಳೂರಿನಲ್ಲಿ ಮೆಸ್ಕಾಂ ಸಿಬ್ಬಂದಿ ಮೇಲೆ ದಾಳಿ

ಜಿಲ್ಲಾದ್ಯಂತ ಧಾರಾಕಾರ ಮಳೆಯಿಂದ ಕಳೆದ ಒಂದು ವಾರದಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಮಳೆಗೆ ಹಲವು ಗ್ರಾಮಗಳಲ್ಲಿ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಮೆಸ್ಕಾಂ ಸಿಬ್ಬಂದಿ ಕೆಲಸಕ್ಕೂ ತೊಂದರೆಯಾಗಿದೆ. ಈ ನಡುವೆ ಹಲ್ಲೆ ಘಟನೆ ನಡೆದಿದ್ದು, ಕಳಸ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಅಪಘಾತ ಪ್ರಕರಣ : ಒಂದೇ ಚಿತೆಯಲ್ಲಿ ಮೂವರ ಅಂತ್ಯ ಸಂಸ್ಕಾರ, ಕುಟುಂಬಸ್ಥರ ಆಕ್ರಂದನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.