ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಮುಂಭಾಗದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಮನವಿ ಕೊಡುವ ನೆಪದಲ್ಲಿ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕರು ಜಿಲ್ಲಾ ಎಸ್ಪಿಗೆ ದೂರು ನೀಡಿದ್ದಾರೆ.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಸಭೆ ನಡೆಸಲು ಸಂಸದೆ ಶೋಭಾ ಕರಂದ್ಲಾಜೆ ಅವರು ತೆರಳುವ ವೇಳೆ ಜಿಲ್ಲಾ ಪಂಚಾಯಿತಿ ಎದುರು ಜಮಾಯಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಹಲ್ಲೆಗೆ ಯತ್ನಿಸಿದ್ದಾರೆ ಎಂದು ದೂರಿದ್ದಾರೆ.
ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯಿತ್ರಿ ಶಾಂತೇಗೌಡ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಎಲ್.ಮೂರ್ತಿ, ನಗರಸಭಾ ಮಾಜಿ ಸದಸ್ಯ ಸಂದೀಪ್, ಪವನ್ ಕುಮಾರ್, ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ಸೇರಿದಂತೆ ಇತರರನ್ನು ಬಂಧಿಸಬೇಕು. ಸೂಕ್ತ ಭದ್ರತೆ ನೀಡಲು ವಿಫಲರಾದ ಪೊಲೀಸ್ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.