ETV Bharat / state

#Ayodhyacase ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್‌ - tomorrow's Ayodhya verdict

ನಾಳೆ ಬೆಳಗ್ಗೆ 10.30 ಕ್ಕೆ ಸುಪ್ರೀಂಕೋರ್ಟ್​ ಸಾಂವಿಧಾನಿಕ ಪೀಠದಿಂದ ಅಯೋಧ್ಯೆ ತೀರ್ಪು ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯದೆಲ್ಲೆಡೆ ಪೊಲೀಸರು ಬಿಗಿ ಭದ್ರತೆ ಒದಗಿಸಲು ಸನ್ನದ್ಧರಾಗಿದ್ದಾರೆ.

ನಾಳೆ ಅಯೋಧ್ಯೆ ತೀರ್ಪು
author img

By

Published : Nov 8, 2019, 11:36 PM IST

Updated : Nov 8, 2019, 11:57 PM IST

ಬೆಂಗಳೂರು: ಅಯೋಧ್ಯೆ ಭೂ ವಿವಾದಕ್ಕೆ ಸಂಬಂಧಿಸಿದಂತೆ ನಾಳೆ ಬೆಳಗ್ಗೆ 10.30 ಕ್ಕೆ ಸುಪ್ರೀಂಕೋರ್ಟ್​ ಸಾಂವಿಧಾನಿಕ ಪೀಠದಿಂದ ತೀರ್ಪು ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯದೆಲ್ಲೆಡೆ ಪೊಲೀಸರು ಬಿಗಿ ಭದ್ರತೆ ಒದಗಿಸಲು ಸನ್ನದ್ಧರಾಗಿದ್ದಾರೆ.

ನಾಳೆ ತೀರ್ಪು ಪ್ರಕಟಿಸುವುದಾಗಿ ಅಧಿಕೃತವಾಗಿ ಮಾಹಿತಿ ಬರುತ್ತಿದ್ದಂತೆ ರಾಜ್ಯ ಪೊಲೀಸರು ಅರ್ಲಟ್ ಆಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗಳಿಗೆ ಭದ್ರತಾ ಕ್ರಮ ಕೈಗೊಳ್ಳುವ ಕುರಿತಂತೆ ಡಿಜಿ ನೀಲಮಣಿ ಎನ್.ರಾಜು ಅವರು ತುರ್ತು ಫ್ಯಾಕ್ಸ್ ಮೂಲಕ ಕಟ್ಟೆಚ್ಚರವಹಿಸುವಂತೆ ಸಂದೇಶ ಕಳುಹಿಸಿದ್ದಾರೆ.

ಸೂಕ್ಷ್ಮ ಹಾಗೂ ಅತೀಸೂಕ್ಷ್ಮ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡುವಂತೆ ಸೂಚನೆ ನೀಡಲಾಗಿದೆ. ಕೋಮುಗಲಭೆ ಹಾಗೂ ಅಶಾಂತಿ‌ ಸೃಷ್ಟಿಸುವವರು ಕಂಡು ಬಂದರೆ ಮುಲಾಜಿಲ್ಲದೆ ಬಂಧಿಸುವಂತೆ ಕಟ್ಟಪ್ಪಣೆ ಹೊರಡಿಸಿದ್ದಾರೆ.

ರಾಜ್ಯ ರಾಜಧಾನಿಯೂ ಪೊಲೀಸ್ ಸರ್ಪಗಾವಲಿನಿಂದ ಕೂಡಿರಲಿದ್ದು, ಮಸೀದಿ ಹಾಗೂ ದೇವಸ್ಥಾನಗಳಿಗೆ ಸೂಕ್ತ ಭದ್ರತೆ ಒದಗಿಸಲು ಪೊಲೀಸರು ಮುಂದಾಗಿದ್ದಾರೆ. ನಾಳೆ 50 ಕೆಎಸ್‌ಆರ್​​​ಪಿ ತುಕಡಿಗಳು ಹಾಗೂ 20 ಸಿಎಸ್ಆರ್ ತುಕಡಿಗಳು, 18 ಮಂದಿ ಐಪಿಎಸ್ ಅಧಿಕಾರಿಗಳು ಸೇರಿದಂತೆ ನಗರದಲ್ಲಿರುವ ಎಲ್ಲಾ ಪೊಲೀಸರು ಮುಂಜಾಗ್ರತವಾಗಿ ಭದ್ರತೆ ಒದಗಿಸುತ್ತಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಬೆಂಗಳೂರು ನಗರ ಪೊಲೀಸ್​ ಆಯುಕ್ತ ಭಾಸ್ಕರ್​ ರಾವ್, ನಗರದಾದ್ಯಂತ 144 ಸೆಕ್ಷನ್​ ನಾಳೆ ಬೆಳಗ್ಗೆ 7 ಗಂಟೆಯಿಂದ ರಾತ್ರಿ 12 ಗಂಟೆವರೆಗೆ ಜಾರಿ ಮಾಡಲಾಗಿದೆ. ನಗರದಲ್ಲಿ ಮದ್ಯ ಮಾರಾಟ ನಿಷೇಧ ಹೇರಲಾಗಿದೆ. ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಲಾಗಿದೆ ಎಂದಿದ್ದಾರೆ.

  • Bengaluru police commissioner,Bhaskar Rao: We've made necessary deployments. Sec 144 CrPC (prohibits assembly of more than 4 people in an area)imposed in Bangalore from 7 am-12 midnight. Social media will be strictly monitored. Liquor shops will remain closed tomorrow. #Karnataka pic.twitter.com/2lgJYIANW1

    — ANI (@ANI) November 8, 2019 " class="align-text-top noRightClick twitterSection" data=" ">

ಕಲಬುರಗಿ ಜಿಲ್ಲೆಯಲ್ಲಿ ಕಟ್ಟೆಚ್ಚರ:

ಕಲಬುರಗಿಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ 144 ಸೆಕ್ಷನ್​ ಜಾರಿ ಮಾಡಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ 4 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ನಾಳೆ ಬೆಳಗ್ಗೆ 8 ಗಂಟೆಯಿಂದ ಭಾನುವಾರ ಬೆಳಗ್ಗೆ 8 ಗಂಟೆವರೆಗೆ ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.

ಕಾಫಿನಾಡಲ್ಲೂ ಪೊಲೀಸ್​ ಬಿಗಿ ಭದ್ರತೆ:

ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಕೂಡ ಪೊಲೀಸರು ಅಲರ್ಟ್ ಆಗಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಿದ್ದು, ಭದ್ರತೆಗಾಗಿ 4 ಕೆಎಸ್ ಆರ್​ಪಿ ಪೊಲೀಸ್ ತುಕಡಿ ನಿಯೋಜನೆ ಮಾಡಲಾಗಿದೆ. ಎಸ್​ಪಿ , ಎಎಸ್ಪಿ 3 ಡಿವೈಎಸ್ ಪಿ ಸೇರಿದಂತೆ ಜಿಲ್ಲೆಯಲ್ಲಿ 2 ಸಾವಿರಕ್ಕೂ ಅಧಿಕ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಜಿಲ್ಲೆಯ ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಪ್ರದೇಶದಲ್ಲಿ ಹೆಚ್ಚಿನ ಭದ್ರತೆಯನ್ನು ನಿಯೋಜನೆ ಮಾಡಲಾಗಿದೆ. ಇನ್ನು ನಾಳೆ ಎಲ್ಲಾ ಶಾಲಾ ಕಾಲೇಜು, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ವಿಶೇಷ ಎಚ್ಚರಿಕೆವಹಿಸಿದ್ದು ಬಂದೋಬಸ್ತ್ ವ್ಯವಸ್ಥೆ ಮಾಡಿದೆ. ಕೆ.ಎಸ್.ಆರ್.ಪಿ ತುಕಡಿಗಳು, 18 ಡಿ.ಎ.ಆರ್. ತುಕಡಿಗಳು ಹಾಗೂ 1 ಡಿ-ಸ್ವಾಟ್ ತುಕಡಿ ನಿಯೋಜಿಸಲಾಗಿದೆ.

ಬೆಳಗಾವಿಯಲ್ಲಿ ನಾಳೆ ಬೆಳಗ್ಗೆ 6 ರಿಂದ‌ 144 ಸೆಕ್ಷನ್ ಜಾರಿಯಾಗಲಿದ್ದು, ನಗರದಾದ್ಯಂತ ‌ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ಇಬ್ಬರು ಡಿಸಿಪಿ,5‌ ಎಸಿಪಿ, 20 ಪಿಐ, 20 ಪಿಎಸ್ ಐ, 1600 ಪೇದೆಗಳು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ನಾಳೆ ಆಯುಕ್ತರ ‌ಕಚೇರಿ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.

Intro:Body:ನಾಳೆ ಅಯೋಧ್ಯೆ ತೀರ್ಪು ಪ್ರಕಟ: ಬೆಂಗಳೂರು ಸೇರಿ ರಾಜ್ಯ ಪೊಲೀಸರು ಹೈಅಲರ್ಟ್..

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ಅಯೋಧ್ಯೆ ಭೂ ವಿವಾದಕ್ಕೆ ಸಂಬಂಧಿಸಿದಂತೆ ನಾಳೆ ಬೆಳಗ್ಗೆ 10.30 ಕ್ಕೆ ಸುಪ್ರೀಂಕೋರ್ಟ್ ನ ಐವರು ಒಳಗೊಂಡ ಸಾಂವಿಧಾನಿಕ ಪೀಠದಿಂದ ತೀರ್ಪು ಪ್ರಕಟ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ರಾಜ್ಯದೆಲ್ಲೆಡೆ ಪೊಲೀಸರು ಸೂಕ್ತ ಬಿಗಿ ಭದ್ರತೆ ಒದಗಿಸಲು ಸನ್ನದ್ಧರಾಗಿದ್ದಾರೆ..
ನಾಳೆ ತೀರ್ಪು ಪ್ರಕಟಿಸುವುದಾಗಿ ಅಧಿಕೃತವಾಗಿ ಮಾಹಿತಿ ಬರುತ್ತಿದ್ದಂತೆ ರಾಜ್ಯ ಪೊಲೀಸರು ಹೈ ಅರ್ಲಟ್ ಆಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ಭದ್ರತೆ ಕ್ರಮ ಕೈಗೊಳ್ಳುವ ಕುರಿತಂತೆ ಡಿಜಿ ನೀಲಮಣಿ ಎನ್ .ರಾಜು ಅವತು ತುರ್ತು ಫ್ಯಾಕ್ಸ್ ಸಂದೇಶ ಕಳುಹಿಸಿದ್ದಾರೆ.
ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡುವಂತೆ ಸೂಚನೆ ನೀಡಲಾಗಿದೆ. ಕೋಮುಗಲಭೆ ಹಾಗೂ ಅಶಾಂತಿ‌ ಸೃಷ್ಟಿಸುವವರನ್ನು ಕಂಡು ಬಂದರೆ ಮುಲಾಜಿಲ್ಲದೆ ಬಂಧಿಸುವಂತೆ ಕಟ್ಟಪ್ಪಣೆ ಹೊರಡಿಸಿದ್ದಾರೆ.
ರಾಜ್ಯ ರಾಜಧಾನಿಯಲ್ಲಿಯು ಪೊಲೀಸ್ ಸರ್ಪಗಾವಲಿನಿಂದ ಕೂಡಿರಲಿದ್ದು ಮಸೀದಿ ಹಾಗೂ ದೇವಸ್ಥಾನಗಳಲ್ಲಿ ಸೂಕ್ತ ಭದ್ರತೆ ಒದಗಿಸಲು ಮುಂದಾಗಿದ್ದಾರೆ.. ನಾಳೆ 50 ಕೆಎಸ್ ಆರ್ ಪಿ ತುಕಡಿಗಳು ಹಾಗೂ 20 ಸಿಎಸ್ಆರ್ ತುಕಡಿಗಳು, 18 ಮಂದಿ ಐಪಿಎಸ್ ಅಧಿಕಾರಿಗಳು ಸೇರಿದಂತೆ ನಗರದಲ್ಲಿರುವ ಎಲ್ಲಾ ಪೊಲೀಸರು ಮುಂಜಾಗ್ರತವಾಗಿ ಭದ್ರತೆ ಒದಗಿಸುತ್ತಿದ್ದಾರೆ.

Conclusion:
Last Updated : Nov 8, 2019, 11:57 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.