ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಆರೋಗ್ಯಧಿಕಾರಿ ಸ್ವಗೃಹದಲ್ಲಿಯೇ ಸಾವನ್ನಪ್ಪಿದ್ದು, ಇದು ಅನುಮಾನಾಸ್ಪದವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರವಿ (54) ಸ್ವಗೃಹದಲ್ಲಿ ಮೃತಪಟ್ಟಿದ್ದು, ಇವರ ಸಾವಿನ ಕುರಿತು ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ.
ವೈದ್ಯಾಧಿಕಾರಿಯ ಮೃತದೇಹವನ್ನು ಮೂಡಿಗೆರೆ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮೃತ ದೇಹವನ್ನು ತೆಗೆದುಕೊಂಡು ಹೋಗುವ ವಿಷಯದಲ್ಲಿ ಕುಟುಂಬಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಪೊಲೀಸರು ಮಧ್ಯೆ ಪ್ರವೇಶಿಸಿ ಜಗಳವನ್ನು ತಡೆದು ರವಿ ಅವರ ತಾಯಿಗೆ ಮೃತದೇಹ ಹಸ್ತಾಂತರಿಸಿದರು. ಬೆಂಗಳೂರಿನ ವೈಟ್ ಫೀಲ್ಡ್ನಲ್ಲಿ ರವಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ತಿಳಿದುಬಂದಿದೆ.
ಈ ಕುರಿತು ಬಣಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.