ETV Bharat / state

ಚಿಕ್ಕಮಗಳೂರು: ಬ್ಯಾಂಕ್​ನಲ್ಲಿ ಅಡವಿಟ್ಟ ಅಸಲಿ ಚಿನ್ನದ ಜಾಗದಲ್ಲಿ ನಕಲಿ ಬಂಗಾರ, ಗ್ರಾಹಕರಿಗೆ ಮಹಾ ವಂಚನೆ

ಬ್ಯಾಂಕ್ ಸಿಬ್ಬಂದಿಯಿಂಲೇ ಗ್ರಾಹಕರಿಗೆ ಮೋಸವಾಗಿರುವ ಕುರಿತು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Bank staff cheated customers
ಬ್ಯಾಂಕ್ ಸಿಬ್ಬಂದಿಯಿಂಲೇ ಗ್ರಾಹಕರಿಗೆ ಮೋಸ, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
author img

By ETV Bharat Karnataka Team

Published : Dec 2, 2023, 7:44 AM IST

Updated : Dec 2, 2023, 1:41 PM IST

ಚಿಕ್ಕಮಗಳೂರು: ಬ್ಯಾಂಕ್ ಸಿಬ್ಬಂದಿಯಿಂದಲೇ ಗ್ರಾಹಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿರುವ ಘಟನೆ ಚಿಕ್ಕಮಗಳೂರು ನಗರದ ಐ.ಜಿ. ರಸ್ತೆಯಲ್ಲಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ನಡೆದಿದೆ. 6 ಕೋಟಿಗೂ ಅಧಿಕ ಹಣ ದುರುಪಯೋಗದ ಆರೋಪ ಕೇಳಿ ಬಂದಿದೆ. ಬ್ಯಾಂಕ್ ಮ್ಯಾನೇಜರ್ ಸಂದೀಪ್ ಕೊಲ್ಲೂರಿ, ಪ್ರಶಾಂತ್, ನಾರಾಯಣಸ್ವಾಮಿ, ಲಾವಣ್ಯ, ಶ್ವೇತಾ ವಿರುದ್ಧ ದೂರು ದಾಖಲಾಗಿದೆ.

ಗ್ರಾಹಕರು ಬ್ಯಾಂಕ್‌ನಲ್ಲಿಟ್ಟಿದ್ದ ಚಿನ್ನ, ಎಫ್​ಡಿ ಹಣವನ್ನು ಬ್ಯಾಂಕ್ ಸಿಬ್ಬಂದಿ ದುರುಪಯೋಗ ಪಡಿಸಿಕೊಂಡಿದ್ದಾರೆ. ಆರೋಪಿಗಳು ಗ್ರಾಹಕರ ಅಸಲಿ ಚಿನ್ನವನ್ನು ಮಾರಾಟ ಮಾಡಿ ನಕಲಿ‌ ಚಿನ್ನವನ್ನು ಬ್ಯಾಂಕ್ ಲಾಕರ್​ನಲ್ಲಿ ಇಟ್ಟಿದ್ದಾರೆ. ಬೆಂಗಳೂರು ಮುಖ್ಯ ಶಾಖೆ ಅಧಿಕಾರಿಗಳ ಪರಿಶೀಲನೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. 141 ಚಿನ್ನದ ಪ್ಯಾಕೆಟ್​ಗಳ ಪೈಕಿ 140 ಪ್ಯಾಕೆಟ್​ಗಳಲ್ಲಿ ನಕಲಿ ಚಿನ್ನ ಪತ್ತೆಯಾಗಿವೆ. ಬ್ಯಾಂಕ್ ಆಡಿಟ್​​ ವೇಳೆ ಕೋಟ್ಯಂತರ ರೂ. ವಂಚನೆ ಮಾಡಿರುವುದು ತಿಳಿದುಬಂದಿದೆ.

ಅಸಲಿ ಚಿನ್ನವನ್ನು ಬೇರೆಡೆ ಅಡ ಇಟ್ಟು ಐವರು ಬ್ಯಾಂಕಿನ ಸಿಬ್ಬಂದಿ ಸಾಲ ಪಡೆದಿದ್ದಾರೆ. ಬ್ಯಾಂಕ್​​ನ ಬೆಂಗಳೂರು ಕಚೇರಿಯ ಹಿರಿಯ ಅಧಿಕಾರಿಗಳು ಶಾಖೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ವಂಚನೆ ಪ್ರಕರಣ ಬಯಲಾಗಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಬೆಂಗಳೂರು ಶಾಖೆಯ ವ್ಯವಸ್ಥಾಪಕರು ಆರೋಪಿಗಳ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬ್ಯಾಂಕ್​ನಲ್ಲಿ ನಡೆದಿದ್ದೇನು? ಗ್ರಾಹಕ ಮಲ್ಲಿಕಾರ್ಜುನ ಎಂಬುವರು 2017ರಲ್ಲಿ 13 ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನ ಅಡವಿಟ್ಟು ಕೇವಲ 2 ಲಕ್ಷ ರೂ. ಸಾಲ ಪಡೆದಿದ್ದರು. ಅಂದಿನಿಂದ ಪ್ರತಿ ವರ್ಷ ಬ್ಯಾಂಕ್​ಗೆ ಬಂದು ಬಡ್ಡಿ ಕಟ್ಟುತ್ತಿದ್ದರು. ಸಾಲದ ವಿಚಾರಕ್ಕೆ ಸಂಬಂಧಿಸಿದಂತೆ ಮುಂಬೈ ಕೇಂದ್ರ ಕಚೇರಿಯಿಂದ ದೂರವಾಣಿ ಕರೆಬರುವುದು ನಿಂತಿದೆ. ಇದರಿಂದ ಬ್ಯಾಂಕ್​ನಿಂದ ಚಿನ್ನ ಬಿಡಿಸಿಕೊಳ್ಳಲು ಹೋದಾಗ ನಿಮ್ಮ ಸಾಲವನ್ನೇ ಕ್ಲೋಸ್ ಮಾಡಲಾಗಿದೆ ಎಂದು ಬ್ಯಾಂಕ್​ ಸಿಬ್ಬಂದಿ ತಿಳಿಸಿದ್ದಾರೆ. ಇದರಿಂದ ಗ್ರಾಹಕ ಮಲ್ಲಿಕಾರ್ಜುನ ಅವರು ಶಾಕ್ ಆಗಿದ್ದಾರೆ. ಅಡವಿಟ್ಟಿರುವ ಅಸಲಿ ಚಿನ್ನದ ಬದಲಾಗಿ, ನಕಲಿ ಚಿನ್ನ ಇಟ್ಟಿರುವುದು ತಿಳಿದಿದೆ. ಇದರ ಜೊತೆಗೆ ಹಲವು ಪ್ರಕರಣಗಳು ಬೆಳಕಿಗೆ ಬರುತ್ತಿದ್ದಂತೆ ಬೆಂಗಳೂರು ಶಾಖೆಯ ಬ್ಯಾಂಕ್​ ಹಿರಿಯ ಅಧಿಕಾರಿಗಳು ನಗರ ಠಾಣೆಯಲ್ಲಿ ದೂರು ಕೊಟ್ಟಿದ್ದಾರೆ. ಎಫ್​ಐಆರ್ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಇದನ್ನೂ ಓದಿ: ಪಂಜಾಬ್​ ನ್ಯಾಷನಲ್​ ಬ್ಯಾಂಕ್​ ದರೋಡೆ: ಬಂದೂಕು ತೋರಿಸಿ 19 ಕೋಟಿ ದೋಚಿ ಪರಾರಿಯಾದ ಖದೀಮರು

Last Updated : Dec 2, 2023, 1:41 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.