ಚಿಕ್ಕಮಗಳೂರು:ಪಕ್ಷದ ಬೆಳವಣಿಗೆ ಹಾಗೂ ಮಗನ ರಾಜಕೀಯ ಭವಿಷ್ಯಕ್ಕಾಗಿ ರಾಜ್ಯದ ವಿವಿಧ ದೇವಸ್ಥಾನ ಸುತ್ತಿ, ಶೃಂಗೇರಿಯಲ್ಲಿ ಪೂಜೆ-ಹೋಮ-ಹವನ ನಡೆಸಿದ್ದ ಮುಖ್ಯಮಂತ್ರಿ ಕುಟುಂಬದ ಸದಸ್ಯರು ಚುನಾವಣೆ ಫಲಿತಾಂಶಕ್ಕೂ ಮುನ್ನ ಮತ್ತೊಂದು ಸುತ್ತು ಟೆಂಪಲ್ ರನ್ ಮುಂದುವರೆಸಿದ್ದಾರೆ.
ಇಂದು ಶೃಂಗೇರಿಯಲ್ಲಿ ಬೆಳಗ್ಗೆ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ ಅನಿತಾ ಕುಮಾರಸ್ವಾಮಿ ಹಾಗೂ ನಿಖಿಲ್ ಹಾಸನದ ಕುಲದೇವರ ಸೇರಿದಂತೆ ವಿವಿಧ ದೇವಸ್ಥಾನಕ್ಕೆ ತೆರಳಿ ಗೆಲುವಿಗಾಗಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಆದರೇ ಅಪ್ಪನಿಗೆ ಅಧಿಕಾರ ಕೊಟ್ಟ ಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ ಮಗನ ಗೆಲುವಿಗಾಗಿಯೂ ವಿಶೇಷ ಪೂಜೆ ಹೋಮ-ಹವನ ನಡೆಸಿದ್ದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ಕುಟುಂಬ ಫಲಿತಾಂಶಕ್ಕೂ ಮುನ್ನ ಮಗನ ಗೆಲುವಿಗಾಗಿ ಮತ್ತೆ ಶಾರದಾಂಬೆ ಮೊರೆ ಹೋಗಿದ್ದಾರೆ.