ETV Bharat / state

ಅಧಿಕಾರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಉಸ್ತುವಾರಿ ಸಚಿವ ಬೈರತಿ ಬಸವರಾಜ್ - Bhairati Basavaraj scolded the officers

ಚಿಕ್ಕಮಗಳೂರು ಜಿಲ್ಲೆಯಲ್ಲಿ ಇನ್ನೂ ಕೆಲವು ಕಾಮಗಾರಿಗಳನ್ನು ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಅಧಿಕಾರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

bhairati-basavaraj-scolded-the-officerst
ಅಧಿಕಾರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಉಸ್ತುವಾರಿ ಸಚಿವ ಭೈರತಿ ಬಸವರಾಜ್
author img

By

Published : Aug 9, 2022, 8:48 AM IST

ಚಿಕ್ಕಮಗಳೂರು : ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದೆ. ಅಮೃತ್ ಯೋಜನೆ ಹಾಗೂ ಒಳಚರಂಡಿ ಕಾಮಗಾರಿ ವಿಳಂಬ ಹಿನ್ನೆಲೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವರು, ನಿಮಗೆ ಮಾನ ಮರ್ಯಾದೆ ಇದ್ಯಾ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.

ಅಧಿಕಾರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಉಸ್ತುವಾರಿ ಸಚಿವ ಭೈರತಿ ಬಸವರಾಜ್

ಕಳೆದ ನವೆಂಬರ್ ತಿಂಗಳಲ್ಲಿ ಮುಗಿಯಬೇಕಿದ್ದ ಕಾಮಗಾರಿಗಳು ಇನ್ನೂ ಮುಗಿಯದ ಹಿನ್ನೆಲೆ ಕೋಪಗೊಂಡ ಸಚಿವರು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಸಭೆಯಲ್ಲಿದ್ದ ವಿಧಾನ ಪರಿಷತ್ ಸದಸ್ಯ ಭೋಜೇಗೌಡರೂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಕಂಟ್ರಾಕ್ಟರನ್ನು ಬ್ಲಾಕ್ ಲಿಸ್ಟಿಗೆ ಹಾಕಿ ಜೈಲಿಗೆ ಕಳಿಸಿ ಜೊತೆಗೆ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ ಅವರನ್ನು ಜೈಲಿಗೆ ಕಳಿಸಿ ಎಂದು ಸಚಿವರು ಹೇಳಿದ್ದು, ಕಾಮಗಾರಿಯ ಪೂರ್ಣ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ : ನಾನು ಎಂಎಲ್ಎ, ಮಂತ್ರಿ, ಮುಖ್ಯಮಂತ್ರಿ ಆಗಲು ಅಂಬೇಡ್ಕರ್ ಕೊಟ್ಟಂತಹ ಸಂವಿಧಾನ ಕಾರಣ: ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.