ಚಿಕ್ಕಮಗಳೂರು: ಬೈಕ್ ಹಾಗೂ ಜೀಪ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿ ಬೈಕ್ ಸವಾರ ಸಾವನ್ನಪ್ಪಿದ್ದು, ಇನ್ನೊಬ್ಬನ ಸ್ಥಿತಿ ಗಂಭೀರವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದ ಬಳಿ ನಡೆದಿದೆ.
ಪಟಾಕಿ ತರಲು ಬೈಕ್ನಲ್ಲಿ ಹೋಗುತ್ತಿದ್ದ ಜಯಂತ್ (25) ಜೀಪ್ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಬೈಕ್ನಲ್ಲಿದ್ದ ಇನ್ನೋರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ. ಆತನನ್ನು ಶಿವಮೊಗ್ಗದಲ್ಲಿ ಆಸ್ವತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದ್ದು, ಲಕ್ಕವಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.