ETV Bharat / state

ಚಿಕ್ಕಮಗಳೂರು: ಬೈಕ್​​​ ಕಳ್ಳರ ಬಂಧನ - Chikkamagaluru crime latest news

ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಖದೀಮರನ್ನು ತರೀಕೆರೆ ತಾಲೂಕಿನ ಲಿಂಗದಹಳ್ಳಿ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Accused arrest
Accused arrest
author img

By

Published : Aug 22, 2020, 10:19 AM IST

ಚಿಕ್ಕಮಗಳೂರು: ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ತರೀಕೆರೆ ತಾಲೂಕಿನ ಲಿಂಗದಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪುನೀತ್, ತೇಜು, ಅನಿಲ್, ಯೋಗೀಶ್, ಅಭಿಷೇಕ್ ಬಂಧಿತ ಆರೋಪಿಗಳು. ಲಿಂಗದಹಳ್ಳಿಯ ಶಾಂತಿ ನಗರದ ಕ್ರಾಸ್ ಬಳಿ ಪೊಲೀಸರು ವಾಹನಗಳ ತಪಾಸಣೆ ಮಾಡುತ್ತಿದ್ದ ವೇಳೆ ಚಿಕ್ಕಮಗಳೂರು ಕಡೆಯಿಂದ ಎರಡು ಬೈಕ್​​ಗಳಲ್ಲಿ ಈ ಐದು ಜನರು ಬರುತ್ತಿರುವುದನ್ನು ನೋಡಿದ ಪೊಲೀಸರು ಇವರನ್ನು ತಡೆದು ವಾಹನದ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ್ದಾರೆ. ಆ ವೇಳೆ ಈ ವಾಹನ ಸವಾರರು ಅನುಮಾನಾಸ್ಪದವಾಗಿ ವರ್ತಿಸಿರುವುದನ್ನು ನೋಡಿದ ಪೊಲೀಸರು, ವಿಚಾರಣೆಗೆ ಒಳಪಡಿಸಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

ಬಂಧಿತರು ಚಿಕ್ಕಮಗಳೂರು ನಗರ, ಬಸವನಹಳ್ಳಿ, ಲಕ್ಕವಳ್ಳಿ, ತರೀಕೆರೆ, ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಿಲ್ಲಿಸಿದ ಬೈಕ್​​ಗಳನ್ನು ಕದ್ದು ಬೇರೆಯವರಿಗೆ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರಂತೆ. ಇವರಿಂದ ಪೊಲೀಸರು 2.5 ಲಕ್ಷ ಮೌಲ್ಯದ 7 ಬೈಕ್​​ಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ಲಿಂಗದಹಳ್ಳಿ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸಿ, ತನಿಖೆ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.